ಕುಶಾಲನಗರ, ಜು. ೧೦ : ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಿ ಸುತ್ತಮುತ್ತ ಪರಿಸರದಲ್ಲಿ ಗಿಡ- ಮರಗಳನ್ನು ಬೆಳೆಸುವ ಮೂಲಕ ಪ್ರಕೃತಿಯ ಸಂರಕ್ಷಣೆಯೊAದಿಗೆ ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡಬೇಕು ಎಂದು ಕುಶಾಲನಗರ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಎಸ್.ಸತೀಶ್ ಮನವಿ ಮಾಡಿದರು.
ಕರ್ನಾಟಕ ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಕೊಡಗು ಜಿಲ್ಲಾ ಘಟಕ, ಕುಶಾಲನಗರ ಕಾವೇರಿ ಪರಿಸರ ಬಳಗ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ಕಾಲೇಜಿನ ಎನ್.ಎಸ್.ಎಸ್.ಘಟಕ ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆಯ ಸಹಯೋಗದಲ್ಲಿ ಕುಶಾಲನಗರ ಸರ್ಕಾರಿ ಕುಶಾಲನಗರ ಸರ್ಕಾರಿ ಎಂಜಿನಿಯರಿAಗ್ ಕಾಲೇಜು ಆವರಣದಲ್ಲಿ "ನಮ್ಮ ನಡೆ ಹಸಿರೆಡೆಗೆ' ಹಾಗೂ 'ನನ್ನ ಗಿಡ ನನ್ನ ಹೆಮ್ಮೆ' ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ :೨೦೨೩ ರ ಅಂಗವಾಗಿ ಕಾಲೇಜು ಆವರಣದಲ್ಲಿ ೨೫೦ ಅರಣ್ಯ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಅರಣ್ಯ ಮತ್ತು ವನ್ಯ ಸಂಪತ್ತನ್ನು ಉಳಿಸಿ ಬೆಳೆಸುವಂತಾಗಲು ಗಿಡ ಮರಗಳನ್ನು ಹೆಚ್ಚಾಗಿ ಬೆಳೆಸಬೇಕು. ಪರಿಸರ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ನಮ್ಮ ಪೂರ್ವಿಕರು ಬೆಳೆಸಿರುವ ಗಿಡ- ಮರಗಳನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಡಾ ಸತೀಶ್ ಹೇಳಿದರು.
ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ಬೋಧಿಸಿ ಮಾತನಾಡಿದ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ನ ಕೊಡಗು ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಮಾತನಾಡಿದರು.
ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ.ವಿ.ಶಿವರಾಂ ಮಾತನಾಡಿ, ಅರಣ್ಯ ಇಲಾಖೆಯ ವತಿಯಿಂದ ನಾಗರಿಕರ ಸಹಭಾಗಿತ್ವದಲ್ಲಿ ಶಾಲಾ- ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ೨೫೦೦ ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಕಾವೇರಿ ಪರಿಸರ ಬಳಗದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್.ವೆAಕಟನಾಯಕ್, ಕಾಲೇಜಿನ ವಿಭಾಗದ ಮುಖ್ಯಸ್ಥರಾದ ಡಾ ಚೂಡಾ ರತ್ನಾಕರ್, ಪರಶಿವಮೂರ್ತಿ, ಉಪನ್ಯಾಸಕರಾದ ಮಹೇಂದ್ರ, ಮಂಜುನಾಥ್, ಡಿ ಆರ್ ಎಫ್ ಓ ಕೆ.ಎನ್.ದೇವಯ್ಯ, ಶ್ರವಣಕುಮಾರ್ ವಿಭೂತಿ, ಚೇತನ್, ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು, ಅರಣ್ಯ ವೀಕ್ಷಕರು ಹಾಗೂ ಸಿಬ್ಬಂದಿಗಳು ಇದ್ದರು.