ಮಡಿಕೇರಿ, ಜು. ೧೦: ಮನೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಮುಡಿ ಗ್ರಾಮದಲ್ಲಿ ಸುಜಯ್ (೨೯) ಎಂಬಾತ ತನ್ನ ಮನೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಬಗ್ಗೆ ದೊರೆತ ಮಾಹಿತಿಯನ್ವಯ ಧಾಳಿ ನಡೆಸಿದ ಪೊಲೀಸರು ಸುಜಯ್ನನ್ನು ಬಂಧಿಸಿ ೪೯ ಗ್ರಾಂ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಎಸ್ಪಿ ಕೆ. ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ವೀರಾಜಪೇಟೆ ಡಿವೈಎಸ್ಪಿ ಆರ್. ಮೋಹನ್ಕುಮಾರ್ ನೇತೃತ್ವದಲ್ಲಿ ಗೋಣಿಕೊಪ್ಪ ವೃತ್ತ ನಿರೀಕ್ಷಕ ಗೋವಿಂದರಾಜು, ಠಾಣಾಧಿಕಾರಿ ಕೆ.ಪಿ. ದೀಕ್ಷಿತ್ ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.