ಮಡಿಕೇರಿ, ಜು. ೧೦: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೂರ್ನಾಡುವಿನಿಂದ ಕೊಂಡAಗೇರಿಗೆ ತೆರಳುವ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿ ಅನ್ವಯ ಧಾಳಿ ಮಾಡಿದ ಪೊಲೀಸರು ಆರೋಪಿಗಳಾದ ಪಂಚವಳ್ಳಿ ನಿವಾಸಿ ಸದ್ದಾಂ ಹುಸೇನ್ (೩೫) ಹಾಗೂ ಜಾಬಿಯಾಉಲ್ಲಾ ಖಾನ್ (೪೦) ಎಂಬವರುಗಳನ್ನು ಬಂಧಿಸಿ ೨೪೧.೪ ಗ್ರಾಂ ಗಾಂಜಾವನ್ನು ವಶಪಡಿಸಿ ಕೊಂಡಿದ್ದಾರೆ.
ಎಸ್ಪಿ ಕೆ. ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಡಿವೈಎಸ್ಪಿ ಎಂ. ಜಗದೀಶ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆಯ ನಿರೀಕ್ಷಕರಾದ ಯು. ಉಮೇಶ್ ಹಾಗೂ
ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.