ಕೂಡಿಗೆ, ಜು.೧೦: ಕೂಡಿಗೆ ಗ್ರಾ.ಪಂ.ವ್ಯಾಪ್ತಿಯ ಸ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸಮಾಜ ಸೇವಕ ಹರಪಳ್ಳಿ ರವೀಂದ್ರ ನೋಟ್ ಬುಕ್‌ಗಳನ್ನು ಕೊಡುಗೆಯಾಗಿ ನೀಡಿದರು. ನಂತರ ಮಾತನಾಡಿದ ಅವರು, ಈ ಬಾರಿ ೪೦ ಸಾವಿರ ಪುಸ್ತಕಗಳನ್ನು ವಿವಿಧ ಸರಕಾರಿ ಶಾಲೆಗಳಿಗೆ ವಿತರಣೆ ಮಾಡಲಾಗಿದೆ. ಶಾಲಾ ಶಿಕ್ಷಕರು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸ ಬೇಕಿದೆ ಎಂದರು. ಕೂಡಿಗೆ ಗ್ರಾ. ಪಂ. ಉಪಾಧ್ಯಕ್ಷೆ ಮೋಹಿನಿ ತಮ್ಮೇಣ್ಣೇ ಗೌಡ, ಮುಖ್ಯ ಶಿಕ್ಷಕಿ ಸಣ್ಣಕ್ಕ, ಹರಪಳ್ಳಿ ರವೀಂದ್ರ ಅಭಿಮಾನಿ ಬಳಗದ ಅಧ್ಯಕ್ಷ ನಾಗರಾಜ್, ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ಸೇರಿದಂತೆ ಶಿಕ್ಷಕ ವರ್ಗದವರು ಮತ್ತು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಜರಿದ್ದರು.