ಮಡಿಕೇರಿ, ಜು. ೧೦ : ಲೋಕಾಯುಕ್ತ ಅಧಿಕಾರಿಗಳಿಂದ ತಾ. ೧೨ ರಂದು ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ ಮತ್ತು ತಾ. ೧೭ ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ. ೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ