ಗೋಣಿಕೊಪ್ಪಲು, ಜು. ೧೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಪೊನ್ನಂಪೇಟೆ ವಲಯದ ಅರುವತೊಕ್ಕಲು ಕಾರ್ಯ ಕ್ಷೇತ್ರದಲ್ಲಿ ನೂತನವಾಗಿ ಆರಂಭಿಸಲಾಗಿರುವ ಖುಷಿ ಜ್ಞಾನ ವಿಕಾಸ ಕೇಂದ್ರವನ್ನು ಪತ್ರಕರ್ತ ಎಂ.ಎA. ಚನ್ನನಾಯಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದ್ದು, ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಿದ ಮಹಿಳೆ ಕೌಟುಂಬಿಕ ನಿರ್ವಹಣೆಯಲ್ಲಿ ಉತ್ತಮ ಪಾತ್ರ ನಿರ್ವಹಿಸಬಲ್ಲರು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಅವರಲ್ಲಿ ಉತ್ತಮ ಸಂಸ್ಕಾರವನ್ನು ಬೆಳೆಸುವ ಮುಖ್ಯವಾದ ಜವಾಬ್ದಾರಿಯನ್ನು ಮಹಿಳೆಯರು ಯಶಸ್ವಿಯಾಗಿ ನಿಭಾಯಿಸಬೇಕು ಎಂದರು.
ವೀರಾಜಪೇಟೆ ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಆರ್. ಶ್ರೇಯ ಮಾತನಾಡಿ, ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರಿಗೆ ವ್ಯಾವಹಾರಿಕ ಕೌಶಲ್ಯಾಭಿವೃದ್ಧಿ, ಆರ್ಥಿಕ ಅಭಿವೃದ್ಧಿ ಯೋಜನೆ ಕುರಿತಂತೆ ತರಬೇತಿ ನೀಡಲಾಗುವುದು ಎಂದರು.
ಪೊನ್ನAಪೇಟೆ ವಲಯ ಮೇಲ್ವಿಚಾರಕ ನರಸಿಂಹ ಮೂರ್ತಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲೆಯಾದ್ಯಂತ ಸಹಸ್ರಾರು ಸಂಘಗಳನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ.
ಮಹಿಳೆಯರಲ್ಲಿ ಉಳಿತಾಯ ಮನೋಭಾವನೆ, ಕುಟುಂಬ ನಿರ್ವಹಣೆ, ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಮಹಿಳೆಯರಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ ಸರ್ವಾಂಗೀಣ ಅಭಿವೃದ್ಧಿ ಸಾಧಿಸುವಂತೆ ಮಾಡುವುದೇ ನಮ್ಮ ಸಂಸ್ಥೆಯ ಗುರಿ ಎಂದರು.
ಅರುವತೊಕ್ಕಲು ಒಕ್ಕೂಟದ ಉಪಾಧ್ಯಕ್ಷೆ ಪಿ.ಕೆ. ಮೀರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿ ರೋಹಿಣಿ ಮತ್ತು ವಿವಿಧ ಸಂಘಗಳ ಸದಸ್ಯರು ಹಾಜರಿದ್ದರು.