ನಾಪೋಕ್ಲು, ಜು. ೧೨: ಸಮೀಪದ ಕೊಳಕೇರಿ ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದ ಏಳು ಮಂದಿ ಆರೋಪಿಗಳನ್ನು ನಗದು ಸಹಿತ ನಾಪೋಕ್ಲು ಪೊಲೀಸರು ಬಂಧಿಸಿದ್ದಾರೆ. ಕೊಳಕೇರಿಯಲ್ಲಿ ಜೂಜಾಟ ವಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಧಾಳಿ ನಡೆಸಿ ಆರೋಪಿಗಳ ಬಳಿಯಿಂದ ೮೫೪೦ ರೂ.ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.