ಸೋಮವಾರಪೇಟೆ, ಜು. ೧೨: ಇಲ್ಲಿನ ಅಪ್ಪು ಅಭಿಮಾನಿ ಬಳಗದಿಂದ ಸಮೀಪದ ಗೋಣಿಮರೂರು ಸರ್ಕಾರಿ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬಟರ್ ಫ್ರೂಟ್ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಕೃಷ್ಣಮೂರ್ತಿ ಹಾಗೂ ಪದಾಧಿಕಾರಿಗಳು ಹಣ್ಣಿನ ಗಿಡಗಳನ್ನು ನೆಟ್ಟರು.

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ಸುನಿತಾ, ಸಹ ಶಿಕ್ಷಕ ರಾಜಪ್ಪ, ಸುಜಾತ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.