ಮುಳ್ಳೂರು, ಜು. ೧೨: ಇಂದಿನ ವಿದ್ಯಾರ್ಥಿ ಸಮೂಹ ಮೊಬೈಲ್ ಫೋನ್, ಮಾಹಿತಿ ಮತ್ತು ತಂತ್ರಜ್ಞಾನದ ವ್ಯವಸ್ಥೆಯನ್ನು ದುರುಪಯೋಗಿಸಿ ತನ್ನತನವನ್ನು ಕಳೆದುಕೊಳ್ಳುತ್ತಿದೆ ಎಂದು ನಾಗಮಂಗಲ ಬಿಜೆಎಸ್ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಲೋಕೇಶ್ ಅಭಿಪ್ರಾಯಪಟ್ಟರು. ಅವರು ಸಮೀಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ೨೦೨೨-೨೩ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಆಧುನಿಕ ಸಮಾಜದಲ್ಲಿ ಮೊಬೈಲ್, ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಅಗತ್ಯ ಇರುತ್ತದೆ. ಆದರೆ ವಿದ್ಯಾರ್ಥಿಗಳು ಇವುಗಳನ್ನು ಅಗತ್ಯಕ್ಕಾಗಿ ಸದ್ಬಳಕೆ ಮಾಡಿಕೊಳ್ಳದೆ ದುರುಪಯೋಗಿಸಿಕೊಳ್ಳುತ್ತಿದ್ದಾರೆ. ಅನಗತ್ಯ ಮೊಬೈಲ್ ಬಳಕೆ ಮತ್ತು ಅಂತರ್ಜಾಲ ವ್ಯವಸ್ಥೆಯ ದುರ್ಬಳಕೆಯಿಂದ ವಿದ್ಯಾರ್ಥಿಗಳು ಸಂಸ್ಕಾರಗಳAತಹ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಇವುಗಳ ಬಳಕೆಯನ್ನು ಕಡಿಮೆ ಮಾಡಿ ಮೌಲ್ಯಾಧಾರಿತ ಶಿಕ್ಷಣದತ್ತ ಚಿಂತನೆ ಹರಿಸುವಂತೆ ಸಲಹೆ ನೀಡಿದರು. ಸರಕಾರ ಚಿಂತನೆ ಹರಿಸಿರುವ ಏಕರೂಪ ಶಿಕ್ಷಣ ನೀತಿ ವ್ಯವಸ್ಥೆಯ ಪಠ್ಯಕ್ರಮದಲ್ಲಿ ಅಂರ‍್ರಾಷ್ಟಿçÃಯ ಮಟ್ಟದ ಪಠ್ಯ ಮಾಹಿತಿ ಒಳಗೊಂಡಿರುತ್ತದೆ. ಇದನ್ನು ಅಧ್ಯಾಪಕರು ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧಿಸಲು ಸಾಧ್ಯವಾಗುವುದಿಲ್ಲ. ಏಕರೂಪ ಶಿಕ್ಷಣ ನೀತಿ ಜಾರಿಯಾಗುವ ಮೊದಲು ಇದಕ್ಕಾಗಿ ವಿಶೇಷ ತರಬೇತಿ ಪಡೆದ ಪರಿಣಿತ ಅಧ್ಯಾಪಕರನ್ನೆ ಹೊಸದಾಗಿ ನೇಮಿಸಬೇಕಾಗುತ್ತದೆ. ಈಗಿನ ಶಿಕ್ಷಣ ವ್ಯವಸ್ಥೆ ಬದಲಾಯಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪಠ್ಯಕ್ರಮದಲ್ಲಿ ಕೆಲವು ಬದಲಾವಣೆ ಮಾಡಿದ ನಂತರ ಏಕರೂಪ ಶಿಕ್ಷಣ ನೀತಿಯನ್ನು ಜಾರಿಗೊಳಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟರು.
ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್. ಪರಮೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಯ ಮಾನಸಿಕ ಒತ್ತಡಗಳನ್ನು ದೂರ ಮಾಡಲು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಪ್ರತಿಭೆಗಳನ್ನು ಪ್ರದರ್ಶಿಸುವಂತೆ ಸಲಹೆ ನೀಡಿದರು.
ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್ ಮಾತನಾಡಿದರು. ಸಮಾರಂಭದಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಶಂಭುಲಿAಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ನಿರ್ದೇಶಕರಾದ ಬಿ.ಕೆ. ಯತೀಶ್, ಸುಲೋಚನ ಗಿರೀಶ್, ಕೊಡ್ಲಿಪೇಟೆ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಜಗದೀಶ್ ಬಾಬು, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬಿ.ಎಸ್.ಪವಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ಎಸ್. ಅಬ್ದುಲ್ ರಬ್ ಮುಂತಾದವರು ಹಾಜರಿದ್ದರು.