ಮಡಿಕೇರಿ, ಜು. ೧೨: ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕುಸಿತ ಪ್ರಕರಣಕ್ಕೆ ಸಂಬAಧಿಸಿದAತೆ ತಾ.೧೮ ಮತ್ತು ೧೯ರಂದು ಕರ್ನಾಟಕ ಲೋಕಾಯುಕ್ತದ ಕಾರ್ಯಪಾಲಕ ಅಭಿಯಂತರರಾದ ಆರ್. ರವಿಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ತಡೆಗೋಡೆ ಕಾಮಗಾರಿ ಕಳಪೆಯಾಗಿದ್ದು, ಇದನ್ನು ನಿರ್ಮಿಸಿದ ಲೋಕೋಪಯೋಗಿ ಇಲಾಖೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ಕಿರಿಯ ಅಭಿಯಂತರರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಈ ಸಂಬAಧ ಲೋಕಾಯುಕ್ತ ಮುಖ್ಯ ಅಭಿಯಂತರರ ಕಚೇರಿಯಿಂದ ಸ್ಪಂದನ ದೊರೆತಿದ್ದು, ದೂರಿಗೆ ಸಂಬAಧಿಸಿದAತೆ ತಾ.೧೮ ಮತ್ತು ೧೯ ರಂದು ಲೋಕಾಯುಕ್ತದ ತನಿಖಾಧಿಕಾರಿಗಳಾದ ಕಾರ್ಯಪಾಲಕ ಅಭಿಯಂತರರಾದ ಆರ್. ರವಿಶಂಕರ್ ಅವರು ಸ್ಥಳ ಪರಿಶೀಲನೆ ಮಾಡಲಿದ್ದಾರೆ ಎಂದು ಅಧಿಕೃತ ಮಾಹಿತಿ ದೊರಕಿದೆ. ಲೋಕಾಯುಕ್ತದಿಂದ ಪ್ರಕರಣದ ತನಿಖೆ ನಡೆಯಲಿದ್ದು, ಈ ಸಂಬAಧ ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಹಿರಿಯ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಎಸ್. ಚಂದ್ರಮೌಳಿ ಅವರುಗಳು ಕೂಡ ಶ್ರಮವಹಿಸಿದ್ದಾರೆ ಎಂದು ಮೈನಾ ತಿಳಿಸಿದ್ದಾರೆ.