ಮಡಿಕೇರಿ, ಜು. ೧೧: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಇದರ ಅಂಗ ಸಂಸ್ಥೆಯಾದ ಕರ್ನಾಟಕ ಇನ್ಸಿ÷್ಟಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಕೆಐಸಿಎಂ) ಮಡಿಕೇರಿ ಇಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ, ಸ್ನಾತಕೋತ್ತರ ಪದವಿ ಹೊಂದಿರಬೇಕು. ತರಬೇತಿ ಅವಧಿ ೬ ತಿಂಗಳ ಕಾಲ ಇದ್ದು, ವಸತಿ ವ್ಯವಸ್ಥೆ ಉಚಿತ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಹೆಯಾನ ರೂ. ೬೦೦ ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ. ೫೦೦ ರಂತೆ ಶಿಷ್ಯ ವೇತನವನ್ನು ನೀಡಲಾಗುವುದು. ಸಹಕಾರ ಸಂಘ-ಸAಸ್ಥೆಗಳ ಅಧಿಕಾರಿ-ಸಿಬ್ಬಂದಿಗಳಿಗೆ ದೂರ ಶಿಕ್ಷಣ ಡಿಸಿಎಂ ತರಬೇತಿ ಆನ್‌ಲೈನ್ (ಔಟಿಟiಟಿe) ಪ್ರವೇಶಾತಿಗೆ ತಿತಿತಿ.ಞsಛಿಜಿಜಛಿm.ಛಿo.iಟಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: ೯೬೬೩೧೫೩೯೨೨, ೭೨೫೯೭೨೯೧೦೪ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.