ವೀರಾಜಪೇಟೆ, ಜು. ೧೨: ನಾಡಪ್ರಭು ಕೆಂಪೇಗೌಡರು ಕೆರೆ-ಕಟ್ಟೆಗಳು, ದೇವಸ್ಥಾನಗಳ ನಿರ್ಮಾಣ ಸೇರಿದಂತೆ ಬೆಂಗಳೂರು ನಗರವನ್ನು ಕಟ್ಟಿದ ಆದರ್ಶ ಆಡಳಿತಗಾರ ಇವರ ಆಡಳಿತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ವಕೀಲ ವಿ.ಕೆ. ದೇವಲಿಂಗಯ್ಯ ಹೇಳಿದರು.

ವೀರಾಜಪೇಟೆ ತಾಲೂಕು ಅಮ್ಮತ್ತಿ-ಒಂಟಿಯAಗಡಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗಿಡಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ದೇವಲಿಂಗಯ್ಯ ಅವರು ಮಾತನಾಡಿ, ಕೆಂಪೇಗೌಡರ ಆಡಳಿತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಎಲ್ಲರಿಗೂ ಮಾದರಿಯಾದ ಆಡಳಿತವನ್ನು ನಡೆಸಿದ್ದರು. ಅವರ ಆದರ್ಶಗಳನ್ನು ನಾವುಗಳು ಪಾಲಿಸುವ ಮೂಲಕ ಸಮಾಜಕ್ಕೆ ಉತ್ತಮ ವ್ಯಕ್ತಿಯಾಗಬೇಕು ಎಂದರು.

ಕೆAಪೇಗೌಡರ ಜಯಂತಿ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭ ಒಕ್ಕಲಿಗರ ಸಂಘದ ವತಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರ ಹಾಗೂ ಆಟದ ಸಾಮಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಒಂಟಿಯAಗಡಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಒ.ಎಂ. ಮಿನ್ನಮ್ಮ ಸಭೆಯಲ್ಲಿ ಮಾತನಾಡಿದರು. ಒಕ್ಕಲಿಗರ ಸಂಘದ ನಿರ್ದೇಶÀಕರಾದ ಕೆ.ಪಿ. ನಾಗರಾಜು, ವಿ.ಎಸ್. ತಿಮ್ಮಯ್ಯ, ವಿ.ಎಂ. ರಾಮಜಿ ಮತ್ತಿತರರು ಉಪಸ್ಥಿತರಿದ್ದರು.

ಈ ವೇಳೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿðಗಳಿಗೆ ಕಿರು ಕಾಣಿಕೆ ನೀಡಿ ಗೌರವಿಸಲಾಯಿತು.