ಡಿ.ವೈ.ಎಸ್.ಪಿ. ಆರ್.ವಿ. ಗಂಗಾಧರಪ್ಪ
ಕುಶಾಲನಗರ, ಜು. ೧೨: ಅರಣ್ಯ ಬೆಳೆಸಲು ವನ ಮಹೋತ್ಸವ ಕಾರ್ಯಕ್ರಮ ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ಗಿಡ ನೆಡುವ ಕಾರ್ಯಕ್ಕೆ ಸಹಕರಿಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ಹೇಳಿದರು.
ಕುಶಾಲನಗರ ಅರಣ್ಯ ಇಲಾಖೆ, ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಕಾವೇರಿ ರಿವರ್ ಸೇವಾ ಟ್ರಸ್ಟ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಸುಂಟಿಕೊಪ್ಪ ಜೆಸಿಸ್, ಕುಶಾಲನಗರ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಡೆದ ವನಮಹೋತ್ಸವ-೨೦೨೩, ನನ್ನ ಗಿಡ-ನನ್ನ ಹೆಮ್ಮೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಭೂಮಿಯಲ್ಲಿ ಶೇ. ೩೩ ರಷ್ಟು ಅರಣ್ಯ ಇರಬೇಕು. ಪ್ರಸ್ತುತ ಭೂಮಿಯಲ್ಲಿ ಇರುವ ಶೇ. ೨೧ ರಷ್ಟು ಅರಣ್ಯವನ್ನು ಶೇ. ೩೩ ರಷ್ಟು ಹೆಚ್ಚಿಸುವ ಗುರಿ ಹೊಂದಬೇಕಾಗಿದೆ. ವನ ಮಹೋತ್ಸವಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗುರಿ ಸಾಧಿಸಲು ಸಾಧ್ಯ ಎಂದರು.
ಪರಿಸರ ಸ್ವಚ್ಛವಾಗಿ ಇಟ್ಟು ಕೊಳ್ಳುವುದರಿಂದ ಹಾಗೂ ಗಿಡ ಮರಗಳನ್ನು ಬೆಳೆಸುವುದರಿಂದ ಶುದ್ಧವಾದ ಗಾಳಿ ಪಡೆಯಬಹುದು. ಈ ಮೂಲಕ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬಹುದು ಎಂದರು. ಅರಣ್ಯ ಇಲಾಖೆಯೊಂದಿಗೆ ಸಂಘ-ಸAಸ್ಥೆಗಳು, ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರು ಜತೆಗೂಡಿ ವನಮಹೋತ್ಸವದಲ್ಲಿ ಗಿಡ ನೆಡುವ ಅಭಿಯಾನವನ್ನು ಯಶಸ್ವಿಗೊಳಿಸುವ ಮೂಲಕ ಅರಣ್ಯ ಪ್ರದೇಶವನ್ನು ವೃದ್ಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಗಂಗಾಧರಪ್ಪ ಮನವಿ ಮಾಡಿದರು.
ಪರಿಸರ ಪ್ರತಿಜ್ಞೆ ಬೋಧಿಸಿ ವನ ಮಹೋತ್ಸವ ಹಾಗೂ ಗಿಡ ನೆಟ್ಟು ಬೆಳೆಸುವ ಸಪ್ತಾಹ ಕುರಿತು ಮಾತನಾಡಿದ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ಸಕಲ ಜೀವರಾಶಿಗಳ ಮುಂದಿನ ಪೀಳಿಗೆಯ ಉಳಿವಿಗಾಗಿ ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡ-ಮರಗಳನ್ನು ಬೆಳೆಸುವ ಮೂಲಕ ಪರಿಸರವನ್ನು ರಕ್ಷಣೆ ಮಾಡುವ ಹೊಣೆ ಪ್ರತಿಯೊಬ್ಬರ ಮೇಲಿದೆ ಎಂದರು. ಕುಶಾಲನಗರ ಅರಣ್ಯ ವಲಯ ಅಧಿಕಾರಿ ಕೆ.ವಿ. ಶಿವರಾಂ ಮಾತನಾಡಿ, ಈ ಬಾರಿಯ ವನ ಮಹೋತ್ಸವದ ಪ್ರಯುಕ್ತ ಇಡೀ ರಾಜ್ಯದಲ್ಲಿ ೫ ಕೋಟಿ ಗಿಡಗಳನ್ನು ನೆಡುವ ಗುರಿ ಹೊಂದಿದ್ದು, ಜುಲೈ ೧ ರಿಂದ ನಡೆಯುತ್ತಿರುವ ಸಸಿ ನೆಡುವ ಅಭಿಯಾನದಲ್ಲಿ೧ ಕೋಟಿ ಸಸಿಗಳನ್ನು ನೆಡುವ ಉದ್ದೇಶವಿದೆ ಎಂದು ಮಾಹಿತಿ ನೀಡಿದರು.
ಕುಶಾಲನಗರ ವಲಯದ ಸಾರ್ವಜನಿಕ ಜಾಗದಲ್ಲಿ ೨,೫೦೦ ಸಸಿಗಳನ್ನು ನೆಡುವ ಕಾರ್ಯ ಕೈಗೊಳ್ಳಲಾಗಿದ್ದು, ಈ ಕಾರ್ಯಕ್ಕೆ ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ ಮಾತನಾಡಿ, ಪರಿಸರ ಬೆಳೆಸಿ ಸಂರಕ್ಷಿಸುವ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು. ತಹಶೀಲ್ದಾರ್ ಟಿ.ಎಂ. ಪ್ರಕಾಶ್ ಮಾತನಾಡಿ, ಎಲ್ಲರೂ ಜತೆಗೂಡಿ ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು. ಕಾವೇರಿ ಪರಿಸರ ಬಳಗದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಅರಣ್ಯ ಇಲಾಖೆಯೊಂದಿಗೆ ಎಲ್ಲರೂ ಕೈಜೋಡಿಸಬೇಕು. ಪ್ರತಿಯೊಬ್ಬರೂ ತಮ್ಮ ಹುಟ್ಟು ಹಬ್ಬದ ಹೆಸರಿನಲ್ಲಿ ಒಂದು ಗಿಡ ನೆಡುವಂತಾಗಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರಬಾಬು, ಕರ್ನಾಟಕ ಕಾವಲು ಪಡೆಯ ಜಿಲ್ಲಾಧ್ಯಕ್ಷ ಎಂ. ಕೃಷ್ಣ, ಪ್ರೆಸ್ಕ್ಲಬ್ ಟ್ರಸ್ಟ್ ಅಧ್ಯಕ್ಷ ಹೆಚ್.ಎಂ. ರಘು, ಎ.ಪಿ.ಎಂ.ಸಿ. ಕಾರ್ಯದರ್ಶಿ ರವಿಕುಮಾರ್, ಪುರಸಭೆ ಮಾಜಿ ಸದಸ್ಯ ಕೆ.ಜಿ. ಮನು, ನಿವೃತ್ತ ಆರ್.ಎಫ್.ಓ., ಎಂ.ಬಿ. ಮೊಣ್ಣಪ್ಪ, ಲಯನ್ಸ್ ಕ್ಲಬ್ನ ಅಧ್ಯಕ್ಷ ಸುಮನ್ ಬಾಲರಾಜ್, ಮಾಜಿ ಅಧ್ಯಕ್ಷ ಕೊಡಗನ ಹರ್ಷ, ಸತೀಶ್ ಕುಮಾರ್, ಹೇಮಂತ್ ಕುಮಾರ್, ಡಾ. ದೇವರಗುಂಡ ಪ್ರವೀಣ್, ಡಾ. ಪಿ.ಸಿ. ರಾಘವೇಂದ್ರ, ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಬಿ.ಜೆ. ಅಣ್ಣಯ್ಯ, ಡಿಆರ್ಎಫ್ಓ ಕೆ.ಎನ್. ದೇವಯ್ಯ, ಶ್ರವಣಕುಮಾರ್ ವಿಭೂತಿ, ಚೇತನ್, ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್. ವೆಂಕಟನಾಯಕ್, ಸಿದ್ದರಾಮ ನಾಟೀಕರ್, ದಿನೇಶ್, ಲಯನ್ಸ್ ಸಂಸ್ಥೆಯ ಸದಸ್ಯರು, ಅರಣ್ಯ ವೀಕ್ಷಕರು ಹಾಗೂ ಸಿಬ್ಬಂದಿ ಇದ್ದರು.