*ಗೋಣಿಕೊಪ್ಪ, ಜು. ೧೨: ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವೀರಾಜಪೇಟೆ ಗೋಣಿಕೊಪ್ಪ ವಲಯದ ಹರಿಶ್ಚಂದ್ರಪುರ ಕಾರ್ಯ ಕ್ಷೇತ್ರದ ವತಿಯಿಂದ ಆಚರಿಸಲಾಯಿತು.
ಗೋಣಿಕೊಪ್ಪ ಆರಕ್ಷಕರ ಠಾಣಾ ಮಹಿಳಾ ಹೆಡ್ ಕಾನ್ಸ್ಟೇಬಲ್ ಕಾವೇರಮ್ಮ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ, ಮಾದಕ ವಸ್ತು ಬಳಕೆಯಿಂದಾಗುವ ತೊಡಕುಗಳ ಬಗ್ಗೆ ಜಾಗೃತಿ ಮೂಡಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಗೋಣಿಕೊಪ್ಪ ಪ್ರೌಢಶಾಲಾ ವಿಜ್ಞಾನ ಶಿಕ್ಷಕ ಕೃಷ್ಣ ಚೈತನ್ಯ ಮಾತನಾಡಿ, ಇಂದಿನ ಮಕ್ಕಳು ದುಷ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಪೋಷಕರು ಹೆಚ್ಚಿನ ಜಾಗೃತಿ ವಹಿಸಬೇಕು. ಮಾದಕ ವಸ್ತು ಎಂದರೇನು? ಯಾವೆಲ್ಲ ಇವೆ. ಅದರಿಂದ ಆಗುವ ದುಷ್ಪರಿಣಾಮಗಳು ಯಾವುವು. ಇದನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.
ಒಕ್ಕೂಟದ ಅಧ್ಯಕ್ಷೆ ಲತಾ ಅಧ್ಯಕ್ಷತೆಯಲ್ಲಿ, ಒಕ್ಕೂಟದ ಪದಾಧಿಕಾರಿಗಳಾದ ಸುಧಾ, ರಾಜೇಶ್ವರಿ, ವಲಯದ ಮೇಲ್ವಿಚಾರಕಿ ದನೀಶ್ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸರಿತಾ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.