ಶನಿವಾರಸಂತೆ, ಜು. ೧೧: ಬೆಂಗಳೂರಿನ ಜ್ಞಾನ ಸಮೃದ್ಧಿ ಚಾರಿಟಬಲ್ ಟ್ರಸ್ಟ್ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸಕಲೇಶಪುರ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ೧ ರಿಂದ ೭ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು ಪೆನ್ನುಗಳನ್ನು ವಿತರಿಸಲಾಯಿತು.

ಶಿಕ್ಷಕರ ಸಹಕಾರ ಹಾಗೂ ಮಾರ್ಗದರ್ಶನದಲ್ಲಿ ೧೫೦ ವಿದ್ಯಾರ್ಥಿಗಳಿಗೆ ಉಚಿತವಾಗಿ ೩ ನೋಟ್ ಪುಸ್ತಕ ಮತ್ತು ಪೆನ್ನುಗಳನ್ನು ವಿತರಿಸಿದ ಜ್ಞಾನ ಸಮೃದ್ಧಿ ಚಾರಿಟಬಲ್ ಟ್ರಸ್ಟ್ನ ನಿರ್ದೇಶಕ ಕೆ.ಕೆ. ತೀರ್ಥಾನಂದ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಪ್ರತಿಭಾನ್ವಿತ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಗುತ್ತಿದೆ ಎಂದರು.

ಚAಗಡಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎನ್. ಕುಮಾರಸ್ವಾಮಿ, ಮುಖಂಡ ಕಾಮನಹಳ್ಳಿ ಕೆ.ಜಿ.ಸಂತೋಷ್ ಕುಮಾರ್ ಹಾಗೂ ಮುಖ್ಯಶಿಕ್ಷಕ ವಿಶ್ವನಾಥ್ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸುತ್ತಿರುವ ಜ್ಞಾನ ಸಮೃದ್ಧಿ ಚಾರಿಟಬಲ್ ಟ್ರಸ್ಟ್ನ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು.

ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ್, ಶಿಕ್ಷಕಿಯರಾದ ಜಾಕ್ಲಿನ್, ಜಸಿಂತಾ, ರಜಿಯಾ, ಮಮತಾ, ರೇಖಾ, ಉರ್ದು ಶಾಲಾ ಮುಖ್ಯಶಿಕ್ಷಕಿ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.