ಕುಶಾಲನಗರ, ಜು. ೧೧: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಸಂಚಾರಿ ವಿಭಾಗದ ಪೊಲೀಸರು ಬೆಳಗ್ಗಿನಿಂದ ಮಧ್ಯಾಹ್ನ ತನಕ ಕಾರ್ಯಾಚರಣೆ ನಡೆಸಿ ಹೆಲ್ಮೆಟ್ ರಹಿತ ೧೫ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರಿಗೆ ದಂಡ ವಿಧಿಸಿದರು.
ಪೊಲೀಸ್ ಇಲಾಖೆ ಸಂಚಾರಿ ವಿಭಾಗದ ಸೂಚನೆಯಂತೆ ಕುಶಾಲನಗರದ ಗಡಿಭಾಗದಿಂದ ಬೈಚನಹಳ್ಳಿವರೆಗೆ ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ಸಿಬ್ಬಂದಿಗಳ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಯಿತು. ಈ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ ಎಂದು ಸಂಚಾರಿ ವಿಭಾಗದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.