ಮಡಿಕೇರಿ, ಜು. ೧೨: ಕಾಂಗ್ರೆಸ್ ರಾಷ್ಟಿçÃಯ ಮುಖಂಡ ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ಪಕ್ಷ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಯಿತು.
ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವ ರದ್ದುಪಡಿಸಿದ್ದಲ್ಲದೆ, ರಾಹುಲ್ಗಾಂಧಿ ವಿರುದ್ಧ ರಾಜಕೀಯ ಪ್ರೇರಿತ ದುರುದ್ದೇಶದ ಕೇಸ್ಗಳನ್ನು ದಾಖಲಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಹಿರಿಯ ಮುಖಂಡ ಟಿ.ಪಿ ರಮೇಶ್, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ಹೆಚ್.ಎಂ. ನಂದಕುಮಾರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ಮುಖಂಡರಾದ ಕೊಲ್ಯದ ಗಿರೀಶ್, ಸತೀಶ್, ಕಾನೆಹಿತ್ಲು ಮೊಣ್ಣಪ್ಪ, ಜುಲೇಕಾಬಿ, ಮಿನಾಜ್ ಪ್ರವೀಣ್, ಮಂಡಿರ ಸದಾ ಮುದ್ದಪ್ಪ ಸೇರಿದಂತೆ ಹಲವರು ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.