ಶನಿವಾರಸಂತೆ, ಜು. ೧೩ : ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಕೊಡ್ಲಿಪೇಟೆ ಕಡೆಗೆ ಹೋಗುತ್ತಿದ್ದ ಕಾರೊಂದು (ಕೆಎ ೦೫- ಪಿ-೦೭೯೯) ಇಲ್ಲಿನ ಮಸೀದಿ ಮುಂಭಾಗದ ಮನೆಯೊಂದಕ್ಕೆ ಡಿಕ್ಕಿ ಹೊಡೆದು ನಂತರ ಪಕ್ಕದ ವಿದ್ಯುತ್ ಕಂಬಕ್ಕೂ ಡಿಕ್ಕಿಯಾಗಿದೆ.
ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದ್ದು ಕಾರು ಚಾಲನೆ ಮಾಡುತ್ತಿದ್ದ ಕೊಡ್ಲಿಪೇಟೆಯ ಯುವಕ ಲಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಇದ್ದ ಐದಾರು ಮಂದಿ ಪ್ರಯಾಣಿಕರು ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.