ನಾಪೋಕ್ಲು, ಜು. ೧೨: ಮಡಿಕೇರಿ ತಾಲೂಕಿನ ಎರಡನೇ ದೊಡ್ಡ ಪಟ್ಟಣವಾದ ನಾಪೋಕ್ಲುವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರವಿದ್ದರೂ ಸೂಕ್ತ ಸೌಲಭ್ಯಗಳಿಲ್ಲದೆ ಜನಸಾಮಾನ್ಯರಿಗೆ ಪ್ರಯೋಜನವಾಗುತ್ತಿಲ್ಲ. ಗ್ರಾಮೀಣ ಪ್ರದೇಶಗಳಿಂದ ಬರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ. ಸಮುದಾಯ ಆರೋಗ್ಯ ಕೇಂದ್ರದ ಸಮಸ್ಯೆಗಳನ್ನು ಬಗೆಹರಿಸಿ ಎಂದು ಸಾರ್ವಜನಿಕರು ಇಲ್ಲಿ ನಡೆದ ಗ್ರಾಮ ಸಭೆಯಲ್ಲಿ ಒತ್ತಾಯಿಸಿದರು. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎರಡು ಅಂತಸ್ತಿನ ಕಟ್ಟಡವಿದೆ. ಆದರೆ ಅಗತ್ಯಕ್ಕೆ ತಕ್ಕಷ್ಟು ಸೌಲಭ್ಯಗಳಿಲ್ಲ. ೩೨. ಸಿಬ್ಬಂದಿಗಳಿದ್ದರೂ ವೈದ್ಯರ ಕೊರತೆಯು ಕಾಡುತ್ತಿದೆ. ನಾಪೋಕ್ಲು ಹೋಬಳಿಯ ಸುಮಾರು ೨೭ ಗ್ರಾಮಗಳ ಮಂದಿ ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬರುತ್ತಿದ್ದು ಸೂಕ್ತ ಸೌಕರ್ಯವಿಲ್ಲದೆ ಸಮಸ್ಯೆ ಎದುರಿಸುವಂತೆ ಆಗಿದೆ. ಈ ಬಗ್ಗೆ ಸಂಬAಧಪಟ್ಟವರು ಕೂಡಲೇ ಗಮನಹರಿಸಬೇಕು ಎಂದು ಸ್ಥಳೀಯ ಕೊಡವ ಸಮಾಜದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಸಾರ್ವಜನಿಕ ರಿಂದ ಪ್ರಶ್ನೆಗಳ ಸುರಿಮಳೆ ಆರೋಪ, ಒತ್ತಾಯಗಳು ಪ್ರತಿಧ್ವನಿಸಿದವು.

ಕಂದಾಯ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುತ್ತಿದೆ ಎಂದು ಸಾರ್ವಜನಿಕರಿಂದ ಆರೋಪ ಕೇಳಿಬಂತು.

ಕಸ ವಿಲೇವಾರಿಯ ಸಮಸ್ಯೆ ತಲೆದೋರಿದೆ ಸಮರ್ಪಕ ನಿರ್ವಹಣೆ ಆಗುತ್ತಿಲ್ಲ. ಕೂಡಲೇ ಜಾಗ ಗುರುತಿಸಿ ಸಮಸ್ಯೆ ಪರಿಹರಿಸಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟವು ಅಲ್ಲಲ್ಲಿ ಕಂಡುಬರುತ್ತಿದೆ. ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ಬಂದಾಗ ಸಮಸ್ಯೆ ಕಾಡುತ್ತಿದೆ. ಸಮೀಪದ ಕಾವೇರಿ ನದಿಯ ದಡದಲ್ಲಿರುವ ಚೆರಿಯಪರಂಬುವಿ ನಲ್ಲಿ ಹಲವರು ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿಕೊಂಡಿದ್ದು ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ಸಿಗುತ್ತಿಲ್ಲ. ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಇಲ್ಲಿನ ಸರ್ಕಾರಿ ಕಾಲೇಜಿನ ಜಾಗ ಒತ್ತುವರಿಯಾಗಿದ್ದು ಸಂಬAಧಿಸಿದAತೆ ಸರ್ವೆ ಕಾರ್ಯ ನಡೆದಿದೆ. ಆದರೂ ತೆರವು ಕಾರ್ಯ ಆಗಿಲ್ಲ. ಈ ಬಗ್ಗೆ ಯಾಕೆ ಕ್ರಮ ಕೈಗೊಂಡಿಲ್ಲ. ಗ್ರಾಮ ಪಂಚಾಯಿತಿಯಿAದ ಪಟ್ಟಣದಲ್ಲಿರುವ ವಾಣಿಜ್ಯ ಕಟ್ಟಡ ಹಾಗೂ ಮನೆಗಳಿಗೆ ವಿಧಿಸುತ್ತಿರುವ ತೆರಿಗೆ ಅಸಮರ್ಪಕವಾಗಿದೆ. ಸೂಕ್ತವಾದ ತೆರಿಗೆ ವಿಧಿಸಿದರೆ ಪಂಚಾಯಿತಿಗೂ ಅಗತ್ಯ ಆದಾಯ ಲಭಿಸಲಿದೆ. ಜಲಜೀವನ್ ಮಿಷನ್ ಸಮರ್ಪಕ ಅನುಷ್ಠಾನ ಆಗಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಕೊಡವ ಸಮಾಜದ ರಸ್ತೆಯಲ್ಲಿ ಗುಂಡಿ ಇದ್ದು ಮಳೆ ನೀರು ತುಂಬಿ ಸವಾರರಿಗೆ ತೊಂದರೆ ಯಾಗುತ್ತಿದೆ. ಇದನ್ನು ಶೀಘ್ರವೇ ಸರಿಪಡಿಸಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು ಒತ್ತಾಯಿಸಿದರು.

ಗ್ರಾಮ ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎಸ್. ಪಾರ್ವತಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ಮಡಿಕೇರಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್ ಪಾಲ್ಗೊಂಡಿದ್ದರು.

ಈ ಸಂದರ್ಭ ಅಧ್ಯಕ್ಷೆ ಹೆಚ್.ಎಸ್. ಪಾರ್ವತಿ, ಪಿಡಿಓ ಚೋಂದಕ್ಕಿ, ಗ್ರಾಮ ಪಂಚಾಯಿತಿ ಸದಸ್ಯ ಕುಲೇಟಿರ ಅರುಣ್ ಬೇಬ, ಇಸ್ಮಾಯಿಲ್, ಪ್ರತೀಪ, ಖುರೇಶಿ, ಸುಧಿ ತಿಮ್ಮಯ್ಯ ಗ್ರಾಮಸ್ಥರ ಪ್ರಶ್ನೆಗಳಿಗೆ ಸಮಜಾಯಿಕೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು.

ಗ್ರಾಮಸ್ಥರಾದ ಕಾಂಡAಡ ಜೋಯಪ್ಪ, ಕೊಂಡಿರ ನಾಣಯ್ಯ, ಕುಲ್ಲೇಟಿರ ಅಜಿತ್ ನಾಣಯ್ಯ, ಕಂಗಾAಡ ಜಾಲಿ ಪೂವಪ್ಪ, ಕಾಂಡAಡ ವಿಶು ಪೂವಯ್ಯ, ಅರೆಯಡ ನಾಣಯ್ಯ, ಬಾಲೆಯಡ ವೇದಪ್ಪ ಸೇರಿದಂತೆ ಇನ್ನಿತರರು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಸಲಹೆ ಸೂಚನೆಗಳನ್ನು ನೀಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು. ಪಂಚಾಯಿತಿ ಸಿಬ್ಬಂದಿಗಳು ಹಾಗೂ ಅಂಗನವಾಡಿ, ಸ್ವಸಹಾಯ ಸಂಘದ ಪದಾಧಿಕಾರಿಗಳು, ಸದಸ್ಯರು ಸಾರ್ವಜನಿಕರು ಪಾಲ್ಗೊಂಡಿದ್ದರು.