ಕೂಡಿಗೆ, ಜು. ೧೩: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಅಂಗನವಾಡಿ ಕೇಂದ್ರದಲ್ಲಿ ಬಾಣಂತಿಯರಿಗೆ ಕೊಳೆತ ಮೊಟ್ಟೆ ವಿತರಣೆಯಾಗಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜು ಅವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಘಟನೆ ಕುರಿತು ಸಂಪೂರ್ಣ ವರದಿ ನೀಡಲು ಸಹ ಆದೇಶಿಸಿದ್ದಾರೆ. ಈ ಕುರಿತು ‘ಶಕ್ತಿ’ಯಲ್ಲಿ ಇಂದು ವರದಿ ಪ್ರಕಟಗೊಂಡಿದ್ದು, ಮತ್ತೆ ಕೊಳೆತ ಮೊಟ್ಟೆಗಳು ವಿತರಣೆಯ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ಅಧಿಕಾರಿಗಳ ತಂಡದಿAದ ಪರಿಶೀಲನೆ
ಬಸವನತ್ತೂರು, ಚಿಕ್ಕತ್ತೂರು, ದೊಡ್ಡತ್ತೂರು ಗ್ರಾಮಗಳÀ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಮನೆಗಳಿಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ
(ಮೊದಲ ಪುಟದಿಂದ) ಅಧಿಕಾರಿಗಳ ತಂಡವು ಭೇಟಿ ನೀಡಿ ವಿತರಣೆಗೊಂಡಿದ್ದ ಮೊಟ್ಟೆಗಳ ಪರಿ ಶೀಲನೆ ನಡೆಸಿತು. ಕೊಳೆತ ಮೊಟ್ಟೆ ವಿತರಣೆ ಹಿನ್ನೆಲೆ ತಂಡದಿAದ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಕೆ.ಜೆ. ವಿಮಲ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿ ವರ್ಗದವರು, ಅಂಗನ ವಾಡಿ ಕಾರ್ಯಕರ್ತರು ಹಾಜರಿದ್ದರು.