ಕುಶಾಲನಗರ, ಜು. ೧೩: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಗೊಂದಿಬಸವನ ಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಕೋ ಕ್ಲಬ್ ಸಹಯೋಗದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು. ಶಾಲಾ ಆವರಣದಲ್ಲಿ ಗಿಡಗಳನ್ನು ನಡೆಸಲಾಯಿತು.
ಶಾಲೆಯ ಮುಖ್ಯೋಪಾ ಧ್ಯಾಯಿನಿ ಜಲಜಾಕ್ಷಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಎಂ.ಎನ್. ಚಂದ್ರಮೋಹನ್ ಅವರು ಪರಿಸರ ಜಾಗೃತಿ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು.
ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಶಾಲನಗರ ವಲಯ ಮೇಲ್ವಿಚಾರಕಿ ಪೂರ್ಣಿಮಾ, ತಾಲೂಕು ಕೃಷಿ ಅಧಿಕಾರಿ ರಾಜು, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷÀ ದೇವ ನಾಯಕ್, ಸದಸ್ಯರುಗಳು, ಒಕ್ಕೂಟದ ಅಧ್ಯಕ್ಷರು, ಪ್ರತಿನಿಧಿಗಳಾದ ಸುಧಾ, ಭಾಗ್ಯ, ಕುಸುಮ, ಶಾಲಾ ಶಿಕ್ಷಕ, ಶಿಕ್ಷಕಿಯರು ಮತ್ತು ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಗಳು ಇದ್ದರು.