ನಾಪೋಕ್ಲು, ಜು. ೧೩: ವಿದ್ಯಾರ್ಥಿ ಗಳು ಓದಿನೊಂದಿಗೆ ಸಂಸ್ಕಾರವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳ ಬೇಕೆಂದು ಶಕ್ತಿ ದಿನ ಪತ್ರಿಕೆಯ ಸಲಹಾ ಸಂಪಾದಕರು ಹಾಗೂ ಕರ್ನಾಟಕ ಜನಪದ ಪರಿಷತ್ತಿನ ಕೊಡಗು ಜಿಲ್ಲಾ ಅಧ್ಯಕ್ಷರಾದ ಬಿ.ಜಿ. ಅನಂತಶಯನ ಕರೆ ನೀಡಿದರು.

ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಜೀವನದಲ್ಲಿ ಶಿಸ್ತು ಬಹಳ ಮುಖ್ಯ. ಉತ್ತಮ ರೀತಿಯ ಸಂಸ್ಕೃತಿ ಮತ್ತು ಆಚಾರ-ವಿಚಾರಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಯಾವಾಗಲೂ ಏಕಾಗ್ರತೆಯಿಂದ ಮನಸ್ಸನ್ನು ಕೇಂದ್ರಿಕೃತ ಗೊಳಿಸಿಕೊಂಡು ಕಾರ್ಯಸಾಧನೆ ಮಾಡಬೇಕೆಂದು ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಓದು ಎಷ್ಟು ಮುಖ್ಯವೋ, ಸಹಪಠ್ಯ ವಿಷಯಗಳು ಅಷ್ಟೇ ಮುಖ್ಯವಾಗಿದೆ. ಪ್ರತಿ ಯೊಬ್ಬರಿಗೂ ಪ್ರತಿಭೆ ಇರುತ್ತವೆೆ. ಅವಕಾಶ ಸಿಕ್ಕಾಗ ಸಮಯವನ್ನು ವ್ಯರ್ಥ ಮಾಡದೆ ವೇದಿಕೆಗಳನ್ನು ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಹೊರ ಹಾಕಬೇಕೆಂದರು. ವೇದಿಕೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ನ ಕಾರ್ಯದರ್ಶಿ ರತ್ನಾಕರ್ ರೈ, ಕೊಡಗು ಜನಪದ ಪರಿಷತ್ತಿನ ಉಪಾಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಕಾಲೇಜಿನ ಸಾಂಸ್ಕೃತಿಕ ಸಮಿತಿ ಸಂಚಾಲಕ ಮನೋಜ್ ಕುಮಾರ್, ಕ್ರೀಡಾ ಮತ್ತು ಶಿಸ್ತು ಸಮಿತಿಯ ಸಂಚಾಲಕ ಮುದ್ದಪ್ಪ, ಐ.ಕ್ಯೂ.ಎ.ಸಿ. ಸಂಯೋಜಕ ನಂದೀಶ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಪಠ್ಯ ಚಟುವಟಿಕೆಯಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಈ ಸಂದರ್ಭ ಅನಂತಶಯನ ಅವರನ್ನು ಸನ್ಮಾನಿಸಿ, ಗೌರವಿಸ ಲಾಯಿತು. ಗೌರಮ್ಮ ಸ್ವಾಗತಿಸಿ, ಯಶೋಧ ನಿರೂಪಿಸಿ, ವಿನೋದ್ ವಂದಿಸಿದರು.