ಕೂಡಿಗೆೆ ಜು. ೧೩: ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವತಿಯಿಂದ ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರಕಾಶ್ ಅವರು ಮಾತನಾಡಿ ಮಾನವ ಸಂಪನ್ಮೂಲವು ಒಂದು ದೇಶದ ಆಸ್ತಿಯಾಗಿದೆ. ಆದರೆ ಜನಸಂಖ್ಯೆಯು ಮಿತವಾಗಿದ್ದರೆ ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ.

ಜನಸಂಖ್ಯೆ ಮಿತಿಮೀರಿದರೆ ದೇಶದ ಅಭಿವೃದ್ಧಿಗೆ ಅದೇ ಶಾಪವಾಗಿ ಪರಿಣಮಿಸುತ್ತದೆ.

ಭಾರತದಲ್ಲಿ ಜನಸಂಖ್ಯೆಯು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು ಹೀಗೆ ಮುಂದುವರೆದರೆ ದೇಶ ಹಲವಾರು ತೊಂದರೆಗಳಿಗೆ ತುತ್ತಾಗಬೇಕಾಗುತ್ತದೆ. ಪ್ರತಿಯೊಬ್ಬರಿಗೂ ಅವಶ್ಯಕವಾಗಿ ಬೇಕಾದ ಆಹಾರ, ಆರೋಗ್ಯ, ಶಿಕ್ಷಣ, ವಸತಿ ಮುಂತಾದ ಮೂಲಭೂತ ಸವಲತ್ತುಗಳನ್ನು ಒದಗಿಸಲು ಕಷ್ಟವಾಗಲಿದೆ. ಭೌಗೋಳಿಕ ವಿಸ್ತೀರ್ಣಕ್ಕೆ ಅನುಗುಣವಾಗಿ ಜನಸಂಖ್ಯೆ ಇದ್ದಾಗ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತದೆ. ದೇಶದ ಪ್ರಗತಿಗೂ ಪೂರಕವಾಗುತ್ತದೆ. ಆದ್ದರಿಂದ ಜನಸಂಖ್ಯಾ ಹೆಚ್ಚಳದಿಂದಾಗುವ ದುಷ್ಪರಿಣಾಮಗಳನ್ನು ಎಲ್ಲರಿಗೂ ಮನವರಿಕೆ ಮಾಡಿಕೊಡುವುದು ಇಂದಿನ ಸಮಾಜಕ್ಕೆ ಅಗತ್ಯವಾಗಿರುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಈ ವಿಷಯದ ಕುರಿತು ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಶಿಕ್ಷಕರಾದ ಮಂಜು, ನಾಗೇಂದ್ರ, ಚಿದಂಬರ್, ದಿನೇಶ್, ಆಸಿಫ್, ದೊಡ್ಡಯ್ಯ, ಅಶ್ವತಿ, ಹರಿಣಾಕ್ಷಿ, ತ್ರಿವೇಣಿ ಹಾಜರಿದ್ದರು.