ಮಡಿಕೇರಿ, ಜು. ೧೩: ಕುಶಾಲನಗರ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ವಿವಿಧೊದ್ಧೇಶ ಸಹಕಾರ ಸಂಘದ ವತಿಯಿಂದ ತಾ.೧೫ರಂದು ಕುಶಾಲನಗರ ಗುಂಡೂರಾವ್ ಬಡಾವಣೆಯ ಎಂ.ಜಿ.ಎA. ಕಾಲೇಜಿನಲ್ಲಿ ಗಿಡನೆಟ್ಟು ನಿರ್ವಹಿಸಿ ಬೆಳೆಸುವ ವನಸಿರಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ ೧೧ ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಶಾಸಕ ಡಾ. ಮಂಥರ್‌ಗೌಡ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕುಶಾಲನಗರ ಕೈ.ವೃ.ವಿ.ಸ.ಸ.ನಿ ಇದರ ಅಧ್ಯಕ್ಷರಾದ ಟಿ.ಆರ್. ಶರವಣಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ಕುಶಾಲನಗರ ಪುರಸಭೆ ಸದಸ್ಯ ಎಂ.ಕೆ. ಸುಂದರೀಶ್, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಮಾಜಿ ಸದಸ್ಯ ವಿ.ಪಿ. ಶಶಿಧರ್, ಶಕ್ತಿ ದಿನಪತ್ರಿಕೆ ಸಂಪಾದಕರಾದ ಜಿ. ಚಿದ್ವಿಲಾಸ್, ಎಂಜಿಎA ಕಾಲೇಜು ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ, ಕುಶಾಲನಗರ ಎ.ಪಿ.ಎಂ.ಸಿ ಅಧ್ಯಕ್ಷ ಕುಮಾರಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್, ವಲಯ ಅರಣ್ಯಾಧಿಕಾರಿ ಶಿವರಾಂ ಪಾಲ್ಗೊಳ್ಳಲಿದ್ದಾರೆ.