ಶನಿವಾರಸAತೆ, ಜು. ೧೩: ಸಮೀಪದ ಕೊಡ್ಲಿಪೇಟೆ ಹೋಬಳಿಯ, ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೇಪುರ ಜೇನುಕುರುಬರ ಹಾಡಿಯಲ್ಲಿ ಮಗನೇ ತಾಯಿಯನ್ನು ಹತ್ಯೆಗೈದ ಘಟನೆ ಬುಧವಾರ ರಾತ್ರಿ ನಡೆದಿದೆ.

ಕೂಲಿ ಕಾರ್ಮಿಕ ರಾಜೇಶ್ (೨೨) ಎಂಬಾತನೆ ತಾಯಿಯನ್ನು ಹತ್ಯೆಗೈದ ಯುವಕ. ಲಲಿತಾ (೪೫) ಹತ್ಯೆಗೀಡಾದ ಮಹಿಳೆ. ರಾತ್ರಿ ಮದ್ಯಪಾನ ಮಾಡಿ ಬಂದ ರಾಜೇಶ್ ತಂಗಿ ಹಾಗೂ ತಾಯಿಯೊಂದಿಗೆ ಜಗಳವಾಡಿದ್ದು, ಜಗಳ ವಿಕೋಪಕ್ಕೆ ತಿರುಗಿದಾಗ ದೊಣ್ಣೆಯಿಂದ ತಾಯಿಯ ತಲೆಗೆ ಹೊಡೆದಿದ್ದು ತಾಯಿ ಲಲಿತಾ ಕೊನೆಯುಸಿರೆಳೆದಿದ್ದಾರೆ.

ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಿತು. ಗುರುವಾರ ಬೆಳಿಗ್ಗೆ ಸಂಬAಧಿ ಸವಿತಾ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿ ರಾಜೇಶ್ ನನ್ನು ಬಂಧಿಸಿದ್ದಾರೆ.

ಸ್ಥಳಕ್ಕೆ ಎಸ್ಪಿ ರಾಮರಾಜನ್, ಎಎಸ್ಪಿ ಸುಂದರ್‌ರಾಜ್, ಡಿವೈಎಸ್ಪಿ ಗಂಗಾಧರಪ್ಪ, ಶನಿವಾರಸಂತೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಪರಶಿವಮೂರ್ತಿ, ಪಿಎಸ್‌ಐ ಗೋವಿಂದ್ ರಾಜ್, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.