ಕೂಡಿಗೆ, ಜು. ೧೩: ಕುಶಾಲನಗರ ಮಹಾತ್ಮಗಾಂಧಿ ಸ್ಮಾರಕ ಕಾಲೇಜಿನಲ್ಲಿ ಪದವಿ ಪ್ರದಾನ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕನಡ್ಕ ವಿನಯ್ ಕುಮಾರ್ ನೆರವೇರಿಸಿದರು. ನಂತರ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕು. ಜೊತೆಗೆ ಹೆಚ್ಚು ಓದಿನ ಕಡೆ ಗಮನ ಹರಿಸುವುದರ ಮೂಲಕ ಜ್ಞಾನ ಸಂಪಾದನೆಯನ್ನು ಮಾಡಿಕೊಳ್ಳಬೇಕು. ನಮ್ಮ ಭಾರತೀಯ ಕಾವ್ಯಗಳಲ್ಲಿ ಬೃಹತ್ ಜ್ಞಾನ ಭಂಡಾರ ಅಡಗಿದೆ. ಅವುಗಳ ಓದುವ ಮೂಲಕ ಅಥೈಸಿಕೊಂಡು ಉದ್ಯೋಗದ ಜೊತೆಯಲ್ಲಿ ಸಮಾಜಮುಖಿ ಬದುಕನ್ನು ಕಟ್ಟಿಕೊಳ್ಳಲು ಸಹಕಾರವಾಗುವುದು ಎಂದರು.

ಈ ಸಂದರ್ಭ ಪದವಿಯ ತರಗತಿಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ವಹಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಪ್ರಾಂಶುಪಾಲ ಎಂ. ನಾಗೇಶ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕ್ಲಾರ ರೇಷ್ಮ, ಮಹಾತ್ಮ ಗಾಂಧಿ ಸ್ಮಾರಕ ಪದವಿ ಕಾಲೇಜು ಪ್ರಾಂಶುಪಾಲೆ ಟಿ.ಎ. ಲಿಖಿತ ಸೇರಿದಂತೆ ವಿವೇಕಾನಂದ ವಿದ್ಯಾ ಸಂಸ್ಥೆಯ ಬೋಧಕ-ಬೋಧಕೇತರ ವರ್ಗ ಹಾಜರಿದ್ದರು. ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.