ಸೋಮವಾರಪೇಟೆ, ಜು. ೧೩: ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಅಂಗವಾಗಿ ತಾ. ೧೮ ರಂದು ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಭೋವಿ-ವಡ್ಡರ ಪ್ರತಿಭಾ ಪುರಸ್ಕಾರ ಹಾಗೂ ವಧುವರರ ಮತ್ತು ಪಾಲಕರ ಸಮಾವೇಶ ನಡೆಯಲಿದ್ದು, ಕೊಡಗಿನಿಂದಲೂ ಸಮುದಾಯ ಬಾಂಧವರು ಭಾಗವಹಿಸಲಿದ್ದಾರೆ ಎಂದು ಭೋಮಿ ಸಮಾಜದ ಜಿಲ್ಲಾಧ್ಯಕ್ಷ ಸುಜಿತ್ ತಿಳಿಸಿದ್ದಾರೆ.

ಸಮಾವೇಶದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. ೯೦ಕ್ಕೂ ಅಧಿಕ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಇದರೊಂದಿಗೆ ಸಮುದಾಯದ ವಧು-ವರರು ಹಾಗೂ ಪೋಷಕರ ಸಮಾವೇಶ ನಡೆಯಲಿದ್ದು ಹೆಚ್ಚಿನ ಮಾಹಿತಿಗೆ ಮೊ: ೯೫೩೫೩೭೬೧೪೫ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸುಜಿತ್ ಮಾಹಿತಿ ನೀಡಿದ್ದಾರೆ.