ನಾಪೋಕು, ಜು. ೧೩: ಸಮೀಪದ ಮರಂದೋಡ ಗ್ರಾಮದಲ್ಲಿ ಮತ್ತೆ ಬೀಡುಬಿಟ್ಟಿರುವ ಆನೆಗಳು ಅನ್ನಾಡಿಯಂಡ ದಿಲೀಪ್ ಅವರ ತೋಟಕ್ಕೆ ಮಂಗಳವಾರ ಲಗ್ಗೆ ಇಟ್ಟು ಅಪಾರ ಪ್ರಮಾಣದ ನಷ್ಟ ಉಂಟುಮಾಡಿವೆ.
ಮರAದೋಡ ಗ್ರಾಮದಲ್ಲಿ ಕಾಡಾನೆಗಳ ಉಪಟಳದಿಂದ ಗ್ರಾಮಸ್ಥರು ನಲುಗುವಂತಾಗಿದ್ದು ಕಾಡಾನೆಗಳು ತೋಟಗಳಿಗೆ ನುಗ್ಗಿ ಕಾಫಿ, ಅಡಿಕೆ, ಬಾಳೆ ಗಿಡಗಳನ್ನು ಧ್ವಂಸ ಪಡಿಸಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.