ಮಡಿಕೇರಿ, ಜು. ೧೩ : ಭಾಗಮಂಡಲದ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯದಲ್ಲಿ ಪ್ರತಿ ವರ್ಷ ಸಂಪ್ರದಾಯದAತೆ ‘ಪೊಲಿಂಕಾನ’ ಉತ್ಸವವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷವೂ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತಾ. ೧೭ ರಂದು ಮಧ್ಯಾಹ್ನ ೧೨ ಗಂಟೆಗೆ ಮಹಾ ಪೂಜೆಯ ನಂತರ ‘ಪೊಲಿಂಕಾನ ಉತ್ಸವ’ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದೊರೆ ತಿಳಿಸಿದ್ದಾರೆ.