ಸೋಮವಾರಪೇಟೆ, ಜು. ೧೪: ವಿದ್ಯುತ್ ಬಿಲ್ ಕಲೆಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆಗೆ ಸಂಬAಧಿಸಿದAತೆ ಆರೋಪಿಯನ್ನು ಸೋಮವಾರಪೇಟೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಮೇರೆ, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಾದಾಪುರ ಸಮೀಪದ ಜಂಬೂರು ಬಾಣೆಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಬಡಾವಣೆಯಲ್ಲಿ ನಿನ್ನೆ ದಿನ ಬಿಲ್ ಕಲೆಕ್ಟರ್ ಪ್ರಶಾಂತ್ ಎಂಬಾತನ ಮೇಲೆ ಅದೇ ಬಡಾವಣೆಯ ರತೀಶ್ ಎಂಬಾತ ಚಾಕುವಿನಿಂದ ಇರಿದು ಗಾಯಗೊಳಿಸಿದ್ದ. ಗಾಯಾಳುವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೋಮವಾರಪೇಟೆ ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್, ಉಪ ಠಾಣಾಧಿಕಾರಿ ಪೊನ್ನಪ್ಪ ಸೇರಿದಂತೆ ಸಿಬ್ಬಂದಿಗಳು ಆರೋಪಿ ರತೀಶ್‌ನನ್ನು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿ, ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಿದ ಹಿನ್ನೆಲೆ, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.