ಸೋಮವಾರಪೇಟೆ, ಜು. ೧೪: ಆಷಾಡ ಮಾಸದ ಕೊನೆಯ ಶುಕ್ರವಾರದಂದು ಇಲ್ಲಿನ ಚಾಮುಂಡೇಶ್ವರಿ ಬಳಗದ ವತಿಯಿಂದ ವಿಶೇಷ ಪೂಜೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.
ಪಟ್ಟಣದ ಟ್ಯಾಕ್ಸಿ ನಿಲ್ದಾಣದಲ್ಲಿ ಆಯೋಜಿಸಿದ್ದ ಚಾಮುಂಡೇಶ್ವರಿಯ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಉದ್ಯಮಿ ಗಿರೀಶ್ ಮಲ್ಲಪ್ಪ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ದೇವಿಗೆ ಅರ್ಚನೆ ಯೊಂದಿಗೆ ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕೆ.ಜಿ.ಸುರೇಶ್ ,ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಸುಭಾಷ್ ತಿಮ್ಮಯ್ಯ, ಚಾಮುಂಡೇಶ್ವರಿ ಬಳಗದ ಸಂಚಾಲಕ ರೋಹಿತ್ ಪೂಜಾರಿ, ಪ್ರಮುಖರುಗಳಾದ ಹೆಚ್.ಎಸ್.ಗಂಗಾ, ಕಾಶಿ ಗೋಪಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.