ಮಡಿಕೇರಿ, ಜು. ೧೪: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿಯ ವತಿಯಿಂದ ಮಡಿಕೇರಿಯ ಸಂತ ಜೋಸೆಫರ ಶಾಲೆಯ ಸಮೀಪದ ವೃತ್ತಕ್ಕೆ (ಕಾನ್ವೆಂಟ್ ಜಂಕ್ಷನ್) ಹಿರಿಯ ಪತ್ರಕರ್ತ, ಶಕ್ತಿ ಪತ್ರಿಕೆಯ ಸಂಸ್ಥಾಪಕರಾದ ದಿ. ಬಿ.ಎಸ್ ಗೋಪಾಲಕೃಷ್ಣ ಅವರ ಹೆಸರನ್ನು ಇಡಬೇಕೆಂದು ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಹಾಗೂ ಪೌರಾಯುಕ್ತ ವಿಜಯ ಅವರಿಗೆ ಕೊಡಗು ಪ್ರೆಸ್‌ಕ್ಲಬ್ ವತಿಯಿಂದ ಮನವಿಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಪೂವಯ್ಯ, ಮಹಾಪೋಷಕ ಜಿ.ರಾಜೇಂದ್ರ, ಕಾರ್ಯದರ್ಶಿ ಅನು ಕಾರ್ಯಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಪಾಧ್ಯಕ್ಷ ಚೀಯಂಡಿ ತೇಜಸ್ ಪಾಪಯ್ಯ, ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ, ಖಜಾಂಚಿ ಬೊಳ್ಳಜ್ಜಿರ ಅಯ್ಯಪ್ಪ, ಸಂಘಟನಾ ಕಾರ್ಯದರ್ಶಿ ಎಂ.ಎನ್ ಚಂದ್ರಮೋಹನ್, ನಿರ್ದೇಶಕ ಪ್ರಸಿನ್ ಗೌಡ ಇದ್ದರು.