ಸೋಮವಾರಪೇಟೆ, ಜು. ೧೪: ಸಮೀಪದ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಪ್ಪು ಅಭಿಮಾನಿ ಬಳಗದಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಅಭಿಮಾನಿ ಬಳಗದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಪದಾಧಿಕಾರಿಗಳು ಶಾಲಾ ಆವರಣದಲ್ಲಿ ವಿವಿಧ ಜಾತೀಯ ಸಸಿಗಳನ್ನು ನೆಟ್ಟು, ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭ ಮುಖ್ಯೋಪಾಧ್ಯಾಯ ಸಿ.ಕೆ. ಶಿವಕುಮಾರ್, ಶಿಕ್ಷಕರಾದ ತೆರೆಸಾ, ರಂಗಸ್ವಾಮಿ, ಪವಿತ್ರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.