ಮಡಿಕೇರಿ, ಜು. ೧೫: ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ ೫ ಕೆ.ಜಿ. ಅಕ್ಕಿ ಬದಲಿಗೆ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ೧೭೦ ರೂ.ನಂತೆ ‘ನೇರ ನಗದು ವರ್ಗಾವಣೆ’ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬAಧ ಜಿಲ್ಲೆಯಲ್ಲಿ ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ೧೨,೯೩೦ ಮಂದಿಯ ಬ್ಯಾಂಕ್ ಖಾತೆ ಬಗ್ಗೆ ಹೋಬಳಿ ಮಟ್ಟದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಆದ್ಯತೆ ಮೇಲೆ ಮಾಹಿತಿ ಪಡೆದು ಯೋಜನೆ ಅನುಷ್ಠಾನಗೊಳಿ ಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದ್ದಾರೆ.
ಮಡಿಕೇರಿ, ಜು. ೧೫: ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ ೫ ಕೆ.ಜಿ. ಅಕ್ಕಿ ಬದಲಿಗೆ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ೧೭೦ ರೂ.ನಂತೆ ‘ನೇರ ನಗದು ವರ್ಗಾವಣೆ’ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬAಧ ಜಿಲ್ಲೆಯಲ್ಲಿ ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ೧೨,೯೩೦ ಮಂದಿಯ ಬ್ಯಾಂಕ್ ಖಾತೆ ಬಗ್ಗೆ ಹೋಬಳಿ ಮಟ್ಟದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಆದ್ಯತೆ ಮೇಲೆ ಮಾಹಿತಿ ಪಡೆದು ಯೋಜನೆ ಅನುಷ್ಠಾನಗೊಳಿ ಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದ್ದಾರೆ.
ಖಾತೆ ಪರಿಶೀಲನೆ ಸಂಬAಧ ಹೋಬಳಿವಾರು ಮಾಹಿತಿ ಸಂಗ್ರಹಿಸಿ ಸರಿಪಡಿಸುವ ಕಾರ್ಯವು ಒಂದು ವಾರದೊಳಗೆ ಸಮರೋಪಾದಿಯಲ್ಲಿ ಪೂರ್ಣಗೊಳಿಸಬೇಕು ಎಂದರು.
ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್ ಅವರು ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ. ಬ್ಯಾಂಕ್ ಖಾತೆ ಪಟ್ಟಿ ನೀಡಲಾಗುವುದು.
ಜಿಲ್ಲೆಯಲ್ಲಿ ೧,೦೧,೬೬೦ ಬಿಪಿಎಲ್ ಕುಟುಂಬಗಳಿವೆ. ೯,೮೬೮ ಅಂತ್ಯೋದಯ ಯೋಜನೆ ಕುಟುಂಬಗಳಿವೆ. ಹಾಗೆಯೇ ೩೭,೧೪೧ ಎಪಿಎಲ್ ಕುಟುಂಬಗಳಿವೆ ಎಂದು ಮಾಹಿತಿ ನೀಡಿದರು.
(ಮೊದಲ ಪುಟದಿಂದ) ೨೦೧೮ ಮತ್ತು ೨೦೧೯ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಮನೆ ಕಲ್ಪಿಸುವಂತಾಗಬೇಕು. ನಮೂನೆ ೫೦, ೫೩, ೯೪ಸಿ, ೯೪ಸಿಸಿ ರಡಿ ಸಾಗುವಳಿ ಚೀಟಿಯನ್ನು ಎಷ್ಟು ಮಂದಿಗೆ ನೀಡಲಾಗಿದೆ. ಸಾಗುವಳಿ ಚೀಟಿ ನೀಡಿರುವುದಕ್ಕೆ ಆರ್‌ಟಿಸಿ ಆಗಿದೆಯೇ ಎಂದು ನಿಖರ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಇದುವರೆಗೆ ಸಾಗುವಳಿ ಚೀಟಿ ನೀಡದಿದ್ದಲ್ಲಿ ಅಂತಹ ಪ್ರಕರಣಗಳನ್ನು ತಿರಸ್ಕರಿಸಬೇಕು. ಈ ಸಂಬAಧ ಒಂದು ವಾರದೊಳಗೆ ವರದಿ ನೀಡುವಂತೆ ತಾಕೀತು ಮಾಡಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಯೋಜನೆಗೆ ಸಂಬAಧಿಸಿದAತೆ ಪ್ರತೀ ತಿಂಗಳು ಮಾಹಿತಿ ಸಂಗ್ರಹಿಸಬೇಕು. ಜನನ ಮತ್ತು ಮರಣ ನೋಂದಣಿಯನ್ನು ನಿಖರವಾಗಿ ದಾಖಲಿಸಬೇಕು.
ಲೈನ್‌ಮನೆಯಲ್ಲಿ ವಾಸಿಸುವ ಕುಟುಂಬಗಳಿಗೆ ಹತ್ತಿರದಲ್ಲಿಯೇ ನಿವೇಶನ ಒದಗಿಸಿ ಮನೆ ನಿರ್ಮಿಸಿಕೊಡಬೇಕು. ಆ ನಿಟ್ಟಿನಲ್ಲಿ ಜಾಗ ಕಾಯ್ದಿರಿಸುವಂತೆ ನಿರ್ದೇಶಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಕಳೆದ ಜೂನ್ ತಿಂಗಳಲ್ಲಿ ಕಡಿಮೆ ಮಳೆಯಾಗಿದೆ. ಜೂನ್ ತಿಂಗಳಲ್ಲಿ ೫೪೪ ಮಿ.ಮೀ. ಸರಾಸರಿ ವಾಡಿಕೆ ಮಳೆಗೆ, ೧೦೬ ಮಿ.ಮೀ. ಮಾತ್ರ ಮಳೆಯಾಗಿದೆ ಎಂದರು.
ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ ೪ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಕಾರ್ಯ ಆಗಬೇಕಿದ್ದು, ಈಗಾಗಲೇ ೨,೫೦೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಆಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಷೇಕ್ ಅವರು ಮಾಹಿತಿ ನೀಡಿದರು.
ಭತ್ತ ಸಸಿಮಡಿ ಕಾರ್ಯ ನಡೆದಿದ್ದು, ಜುಲೈ ಅಂತ್ಯದವರೆಗೆ ೨ ಅಥವಾ ೩ ಬಾರಿ ಉತ್ತಮ ಮಳೆ ಆಗಬೇಕಿದೆ ಎಂದು ಮಾಹಿತಿ ನೀಡಿದರು.
ಜಿ.ಪಂ. ಸಿಇಓ ವರ್ಣೀಶ್ ನೇಗಿ ಅವರು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಅನುಷ್ಠಾನ, ಅಂಬೇಡ್ಕರ್ ವಸತಿ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆಗಳ ಪ್ರಗತಿ ಸಂಬAಧಿಸಿದAತೆ ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಜಿ.ಪಂ.ಯೋಜನಾ ನಿರ್ದೇಶಕರಾದ ಜಗದೀಶ್, ಜಿ.ಪಂ.ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಜಿ.ಪಂ.ಎAಜಿನಿಯರ್ ಸುರೇಶ್ ಕುಮಾರ್, ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಳ್ಳಿಚಂಡ ಕಾರ್ಯಪ್ಪ, ಸೆಸ್ಕ್ ಇಇ ಅನಿತಾ ಬಾಯಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಆರ್.ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಹಿಂದುಳಿದ ವರ್ಗಗಳ ಅಧಿಕಾರಿ ಎನ್.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಕಾರ್ಮಿಕ ಅಧಿಕಾರಿ ಹರ್ಷವರ್ಧನ, ತಹಶೀಲ್ದಾರರಾದ ಪ್ರಕಾಶ್, ಕಿರಣ್ ಗೌರಯ್ಯ, ಎಸ್.ಎನ್.ನರಗುಂದ, ಪ್ರಶಾಂತ್, ಪೌರಾಯುಕ್ತರಾದ ವಿಜಯ ಅವರು ಮಾಹಿತಿ ನೀಡಿದರು.