ಸೋಮವಾರಪೇಟೆ, ಜು. ೧೬: ಇಲ್ಲಿಗೆ ಸಮೀಪದ ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ೨೦೦೦-೨೦೦೧ನೇ ಬ್ಯಾಚಿನ ವಿದ್ಯಾರ್ಥಿಗಳಿಂದ ಗುರುವಂದನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಸುಮಾರು ೨೧ ವರ್ಷಗಳ ಹಿಂದೆ ಬೋಧನೆ ಮಾಡಿದ ಶಿಕ್ಷಕರುಗಳಿಗೆ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಗಳಿಸಲು ಶ್ರಮಿಸಿದ ಶಾಲಾ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ, ಗೌರವ ನಮನ ಮತ್ತು ಗುರುವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಹರೀಶ್ ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕ ನೂತನ್ ಕುಮಾರ್, ಶಿಕ್ಷಕರಾದ ಎಂ.ಎಲ್. ಶ್ರೀಕಾಂತ್, ಕೆ.ಎಂ. ಗಿರಿಜಾಂಬ, ಹಿರಿಯ ಶಿಕ್ಷಕ ರಾದ ಗಣಪತಿ ಭಟ್, ಉಷಾ, ಸಾಯಿರ ಬಾನು, ದಿನೇಶ್ ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ೧೦೦ಕ್ಕೂ ಅಧಿಕ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮ ಸ್ಥರು ಮತ್ತು ಈ ಹಿಂದೆ ಕರ್ತವ್ಯ ನಿರ್ವ ಹಿಸಿದ್ದ ಶಿಕ್ಷಕರುಗಳು ಭಾಗವಹಿಸಿದ್ದರು.