ಸೋಮವಾರಪೇಟೆ, ಜು. ೧೬: ಅರಣ್ಯ ಇಲಾಖೆ ಮತ್ತು ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಉಪವಲಯ ಅರಣ್ಯಾಧಿಕಾರಿ ಕೆ.ಸಿ. ನಾರಾಯಣ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ, ನಮ್ಮ ಸುತ್ತಲಿನ ಪರಿಸರವನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ವಿದ್ಯಾರ್ಥಿಗಳು ತಮ್ಮ ಮನೆಯ ಸುತ್ತ ಮುತ್ತ ಒಂದೊAದು ಗಿಡ ನೆಡುವ ಮೂಲಕ ಪರಿಸರದ ಬೆಳವಣಿಗೆ ಮಾಡಬೇಕೆಂದರು.
ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಬಿ.ಎಂ. ಚಂದ್ರಾಜು, ಕಾರ್ಯದರ್ಶಿ ಎಸ್. ವೆಂಕಟೇಶ್, ನಿರ್ದೇಶಕ ಎ.ಎಸ್. ಮಹೇಶ್, ಮುಖ್ಯ ಶಿಕ್ಷಕಿ ಪಿ.ಕೆ. ಲಕ್ಷ್ಮೀ, ಕ್ಷೇಮಾಭಿವೃದ್ಧಿ ಅಧಿಕಾರಿ ವಿಜಯ್ ಮತ್ತಿತರರು ಇದ್ದರು.