ಕೂಡಿಗೆ, ಜು. ೧೬: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬದ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ನೆರವೇರಿಸಿ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಇಂತಹ ಸೌಲಭ್ಯಗಳು ದೊರಕುವುದರಿಂದ ಅದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯೆ ಫಿಲೋಮಿನಾ ಮಾತನಾಡಿ, ಕಣ್ಣಿಗೆ ಸಂಬAಧಿಸಿದAತಹ ಇಂತಹ ಕಾರ್ಯಕ್ರಮಗಳು ಜಿಲ್ಲಾ ಮಟ್ಟದಲ್ಲಿ ಮಾತ್ರ ಮೊದಲು ನಡೆಯುತ್ತಿದ್ದವು. ಇದೀಗ ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಕಣ್ಣಿನ ಆರೋಗ್ಯ ತಪಾಸಣೆ ಮಾಡುತ್ತಿರುವುದು ಎಲ್ಲರಿಗೂ ಸಹಕಾರಿಯಾಗಿದೆ ಎಂದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತೇಜಸ್ವಿ ಆರೋಗ್ಯ ಇಲಾಖೆಯ ಯೋಜನೆಗಳ ಬಗ್ಗೆ ಸಮರ್ಪಕವಾದ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಗೌರಮ್ಮ, ಚಂದ್ರು ಮೂಡ್ಲಿಗೌಡ, ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೪೨ ಮಂದಿ ತಪಾಸಣೆ ಮಾಡಿಸಿಕೊಂಡರು.