ಮಡಿಕೇರಿ, ಜು. ೧೭ : ಸರ್ಕಾರದ ಆದೇಶದಂತೆ ಅಂತ್ಯೋದಯ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಪ್ರತಿ ಫಲಾನುಭವಿಗಳಿಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ ೫ ಕೆ.ಜಿ ಆಹಾರ ಧಾನ್ಯದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ೫ ಕೆ.ಜಿ ಹೆಚ್ಚುವರಿ ಅಕ್ಕಿಯ ಮಡಿಕೇರಿ, ಜು. ೧೭ : ಸರ್ಕಾರದ ಆದೇಶದಂತೆ ಅಂತ್ಯೋದಯ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಪ್ರತಿ ಫಲಾನುಭವಿಗಳಿಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ ೫ ಕೆ.ಜಿ ಆಹಾರ ಧಾನ್ಯದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ೫ ಕೆ.ಜಿ ಹೆಚ್ಚುವರಿ ಅಕ್ಕಿಯ ಮಾಹಿತಿ ನೀಡಿದರು.
ಇನ್ನು ೨ ಅಥವಾ ೩ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದ್ದು, ಈಗಾಗಲೇ ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿದೆ. ಎಎವೈ ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಕೊಡಗು ಜಿಲ್ಲೆಯ ೮೦,೫೨೫ ಫಲಾನುಭವಿಗಳಿಗೆ ರೂ. ೪,೨೪,೬೭,೫೩೦ ಮೊತ್ತವನ್ನು ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ.
ಫಲಾನುಭವಿಗಳು ಖಾತೆಗೆ ಜಮೆ ಆಗಿರುವ ಬಗ್ಗೆ ಮತ್ತು ಈ ಕುರಿತು ಸಮಸ್ಯೆಗಳಿದ್ದರೆ ಸ್ಥಳೀಯವಾಗಿ ತಾಲೂಕಿನ ಆಹಾರ ಶಿರಸ್ತೇದಾರರು, ನಿರೀಕ್ಷಕರುಗಳನ್ನು ಸಂಪರ್ಕಿಸಬಹು ದಾಗಿದೆ ಎಂದರು.
ಆಧಾರ್ ಜೋಡಣೆ ಮಾಡಿರುವ ಮತ್ತು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು
(ಮೊದಲ ಪುಟದಿಂದ) ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯ ಕುಟುಂಬಗಳು ನೇರ ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ ಹಾಗೂ ಕಳೆದ ಮಾರ್ಚ್, ಏಪ್ರಿಲ್, ಮೇ ೨೦೨೩ರ ತಿಂಗಳುಗಳಲ್ಲಿ ಸತತವಾಗಿ ಪಡಿತರ ಆಹಾರ ಧಾನ್ಯವನ್ನು ಪಡೆಯದ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದ ಶರತ್ ಅವರು ಮಾಹಿತಿ ನೀಡಿದರು.
ಅಂತ್ಯೋದಯ ಪಡಿತರ ಚೀಟಿಗಳಿಗೆ ಸಂಬAಧಿಸಿದAತೆ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರುವ ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬಗಳ ಪಡಿತರ ಚೀಟಿಗೆ ಈಗಾಗಲೆ ೩೫ ಕೆ.ಜಿ ಅಕ್ಕಿಯನ್ನು ಪ್ರತಿ ತಿಂಗಳು ನೀಡುತ್ತಿರುವುದರಿಂದ ಅಂತಹ ಅಂತ್ಯೋದಯ ಪಡಿತರ ಚೀಟಿಗಳಿಗೆ ನೇರ ನಗದು ವರ್ಗಾವಣೆ ಸೌಲಭ್ಯವನ್ನು ನೀಡಲಾಗುವುದಿಲ್ಲ. ಉಳಿದಂತೆ ೪ ಸದಸ್ಯರಿದ್ದರೆ, ಈ ಕುಟುಂಬವು ರೂ. ೧೭೦ (೩೪x೫x೧) ಗಳನ್ನು, ೫ ಸದಸ್ಯರನ್ನು ಹೊಂದಿರುವ ಕುಟುಂಬವು ರೂ. ೫೧೦ (೩೪x೫x೩) ಗಳನ್ನು ಅಥವಾ ೬ ಸದಸ್ಯರನ್ನು ಹೊಂದಿರುವ ಕುಟುಂಬವು ರೂ. ೮೫೦ (೩೪x೫x೫) ಗಳನ್ನು ಪಡೆಯುತ್ತದೆ. ಇದಕ್ಕಿಂತ ಹೆಚ್ಚಿನ ಸದಸ್ಯರಿದ್ದಲ್ಲಿ ಇದೇ ಅನುಪಾತವು ಮುಂದುವರೆಯುತ್ತದೆ ಎಂದು ಹೇಳಿದರು.
ಡಿ.ಬಿ.ಟಿ ಮುಖಾಂತರ ಪಡಿತರ ಚೀಟಿ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡುವ ಯೋಜನೆ ಸಂಬAಧ ಒಟ್ಟು ೧೨೯೩೦ ಡಿ.ಬಿ.ಟಿ ಫಲಾನುಭವಿಗಳ ಬ್ಯಾಂಕ್ ಖಾತೆಯು Iಟಿಚಿಛಿಣive/ ಓoಣ ಚಿvಚಿiಟಚಿbಟe iಟಿ ಆಃ ಸ್ಥಿತಿಯಲ್ಲಿದ್ದು, ಇಂತಹ ಫಲಾನುಭವಿಗಳ ಪಟ್ಟಿಯನ್ನು ಸಂಬAಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರದರ್ಶಿಸಲಾಗಿರುತ್ತದೆ. ಈ ಪಟ್ಟಿಯಲ್ಲಿರುವ ಫಲಾನುಭವಿಗಳು ತುರ್ತಾಗಿ ತಮ್ಮ ಬ್ಯಾಂಕ್ ಖಾತೆಗಳನ್ನು ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ೨೭೪ ನ್ಯಾಯಬೆಲೆ ಅಂಗಡಿಗಳಿದ್ದು, ಸರ್ಕಾರದ ನಿರ್ದೇಶನದಂತೆ ಆಹಾರ ಧಾನ್ಯ ಪೂರೈಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.
ಕೆಎಫ್‌ಸಿಎಸ್‌ಇ, ಟಿಎಪಿಸಿಎಂಎಸ್, ವಿಎಸ್‌ಎಸ್‌ಎನ್, ಪ್ರಾಥಮಿಕ ಕೃಷಿ ಸಹಕಾರ ಸಂಘ, ಸ್ತಿçÃಶಕ್ತಿ ಗುಂಪು, ಮಹಿಳಾ ಮಂಡಳಿ, ಯುವಕ ಮಂಡಳಿ, ಇತರೆ ಸಂಘ ಸಂಸ್ಥೆಗಳು ಸೇರಿದಂತೆ ೨೭೪ ನ್ಯಾಯಬೆಲೆ ಅಂಗಡಿಗಳಿದ್ದು, ನಿಯಮಾನುಸಾರ ಪಡಿತರ ವಿತರಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರದ ೧೨ ಸಾವಿರದಷ್ಟು ಕುಟುಂಬಗಳಿದ್ದು, ಇವರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮತ್ತು ಇಕೆವೈಸಿ ಮಾಡುವ ನಿಟ್ಟಿನಲ್ಲಿ ಅಂಚೆ ಕಚೇರಿ, ಬ್ಯಾಂಕ್ ಹಾಗೂ ಇತರರು ಶ್ರಮಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್ ಅವರು ಕೊಡಗು ಜಿಲ್ಲೆಗೆ ಪ್ರತೀ ತಿಂಗಳು ಅಂತ್ಯೋದಯ ಅನ್ನ ಯೋಜನೆಯಡಿ ೩,೪೫೩.೪೪ ಕ್ವಿಂಟಾಲ್, ಬಿಪಿಎಲ್ ಕುಟುಂಬದವರಿಗೆ ೧೫,೪೧೨.೫ ಕ್ವಿಂಟಾಲ್ ಪಡಿತರ ವಿತರಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಮಡಿಕೇರಿಯ ಆರ್‌ಎಂಸಿ. ಆವರಣ, ಕಾಂತೂರು ಮೂರ್ನಾಡು ಟಿ.ಎಪಿಸಿಎಂಎಸ್, ಕುಶಾಲನಗರ ಆರ್‌ಎಂಸಿ ಮತ್ತು ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನ ಬಳಿ ಇರುವ ಎಪಿಸಿಎಂಎಸ್, ವೀರಾಜಪೇಟೆ ಪಟ್ಟಣದ ಚಿಕ್ಕಪೇಟೆ ಚತ್ರಕೆರೆ ಎಪಿಸಿಎಂಎಸ್, ಗೋಣಿಕೊಪ್ಪದ ಎಪಿಸಿಎಂಎಸ್ ಈ ಗೋದಾಮುಗಳಲ್ಲಿ ಸಗಟು ಗೋದಾಮು ಹೊಂದಿದೆ ಎಂದು ಆಹಾರ ಇಲಾಖೆ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಹೊಸ ಪಡಿತರ ಚೀಟಿಗಾಗಿ ೬,೬೬೬ ಅರ್ಜಿಗಳು ಸಲ್ಲಿಕೆಯಾಗಿದ್ದು, ೪,೨೧೦ ಅರ್ಜಿಗಳಿಗೆ ಅನುಮೋದನೆಯಾಗಿದೆ. ೩೩೮ ತಿರಸ್ಕೃತವಾಗಿದೆ. ಉಳಿದಂತೆ ೨,೧೧೮ ಬಾಕಿ ಇದೆ ಎಂದು ಕುಮುದಾ ಶರತ್ ಅವರು ಮಾಹಿತಿ ನೀಡಿದರು.
ಕುಟುಂಬದ ಮುಖ್ಯಸ್ಥರನ್ನು ಗುರುತಿಸಿರುವ ಆಧಾರ್ ಜೋಡಣೆ ಮಾಡಿರುವ ಮತ್ತು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ ಎಂದು ಮಾಹಿತಿ ನೀಡಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ ನಾಯಕ್, ಅಂಚೆ ಕಚೇರಿಯ ವ್ಯವಸ್ಥಾಪಕ ಬಿಬಿನ್ ಅವರು ಬ್ಯಾಂಕ್ ಖಾತೆ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದರು.
ಕೆಎಫ್‌ಸಿಸಿಎಫ್ ಕೊಡಗು ಜಿಲ್ಲಾ ವ್ಯವಸ್ಥಾಪಕ ಪ್ರೇಮ್ ಕುಮಾರ್, ಬೆಂಬಲ ಬೆಲೆ ಯೋಜನೆಯ ಜಿಲ್ಲಾ ವ್ಯವಸ್ಥಾಪಕರಾದ ಕೆ.ಪಿ.ಸೋಮಯ್ಯ, ಸಗಟು ಮಳಿಗೆ, ಗೋದಾಮು ವ್ಯವಸ್ಥಾಪಕರು, ಆಹಾರ ನಿರೀಕ್ಷಕರು, ಆಹಾರ ಶಿರಸ್ತೆದಾರರು ಇತರರು ಇದ್ದರು.