ಸಿದ್ದಾಪುರ, ಜು. ೧೭: ಕಾಡಾನೆ ದಾಳಿಗೆ ಹೆದರಿ ಓಡುವ ಸಂದರ್ಭ ವ್ಯಕ್ತಿಯೋರ್ವ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿದ್ದಾಪುರ ಸಮೀಪದ ಅವರೆಗುಂದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅವರೆಗುಂದ ಗ್ರಾಮ ನಿವಾಸಿ ರಘು (೩೫) ಮತ್ತು ಕುತ್ತಿಗೆಯ ಭಾಗಕ್ಕೆ ಗಂಭೀರವಾದ ಗಾಯವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಣೇಶ ಎಂಬವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಗಾಯಗೊಂಡಿರುವ ರಘು ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಬಳಿಕ ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.

ಕುಶಾಲನಗರ ವಲಯ ಅರಣ್ಯಾಧಿಕಾರಿ ಶಿವರಾಂ ಹಾಗೂ ಉಪವಲಯ ಅರಣ್ಯಾಧಿಕಾರಿ ಕನ್ನಂಡ ರಂಜನ್ ಭೇಟಿ ನೀಡಿ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿ

ಚಿಕಿತ್ಸೆ ವೆಚ್ಚವನ್ನು ಅರಣ್ಯ ಇಲಾಖೆ ಭರಿಸಲಿದೆ ಎಂದು ಶಿವರಾಂ ಮಾಹಿತಿ ನೀಡಿದ್ದಾರೆ.