ಮಡಿಕೇರಿ, ಜು. ೧೭: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ೯ ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯಗಳನ್ನ ಹಾಗೂ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಅಭಿಯಾನ ಬಲ್ಯಮಂಡೂರು, ಕಾನೂರು, ನಿಟ್ಟೂರು, ಹೊಸೂರು ಗ್ರಾಮಗಳಲ್ಲಿ ನಡೆಯಿತು. ಸಂಸದ ಪ್ರತಾಪ್ ಸಿಂಹ ಭಾಗಿಯಾಗಿ ಕೇಂದ್ರದ ಯೋಜನೆ ಹಾಗೂ ಸಾಧನೆ ಬಗ್ಗೆ ವಿವರಿಸಿದರು. ಮಾಜಿ ಶಾಸಕ ಕೆ.ಜಿ. ಬೋಪಯ್ಯ ಸೇರಿದಂತೆ ಪಕ್ಷದ ಪ್ರಮುಖರು ಈ ಸಂದರ್ಭ ಹಾಜರಿದ್ದರು.
ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಕಳಪೆ ಕಾಮಗಾರಿ ನಡೆದಿದೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮಸ್ಥರನ್ನು ಕರೆದು ಗ್ರಾಮ ಪಂಚಾಯಿತಿಯಲ್ಲಿ ಸಭೆ ನಡೆಸಿ ಸರಿ ಪಡಿಸುವಂತೆ ಅಧಿಕಾರಿಗಳಿಗೆ ಪ್ರತಾಪ್ ಸಿಂಹ ಸೂಚಿಸಿದರು.