ಸೋಮವಾರಪೇಟೆ, ಜು. ೧೮: ಅಬ್ಬೂರುಕಟ್ಟೆ ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇ ಗೌಡರ ಜಯಂತಿ ಅಂಗವಾಗಿ ತಾ. ೨೩ರಂದು ಹೊಸಳ್ಳಿಯಲ್ಲಿ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಹಾಗೂ ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋ ಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು ತಾ. ೨೩ರಂದು ಬೆಳಿಗ್ಗೆ ೯.೩೦ ಗಂಟೆಗೆ ಹೊಸಳ್ಳಿ ಗ್ರಾಮದ ಕುಶಾಲಪ್ಪ ಅವರಿಗೆ ಸೇರಿದ ಗದ್ದೆಯಲ್ಲಿ ಕ್ರೀಡಾಕೂಟ ಆರಂಭ ಗೊಳ್ಳಲಿದ್ದು, ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಹುಣಸೂರು ಶಾಸಕ ಹರೀಶ್ ಗೌಡ, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಹರಪಳ್ಳಿ ರವೀಂದ್ರ, ಜಿಲ್ಲಾ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಲ್ಲಪ್ಪ, ಉದ್ಯಮಿ ಅರುಣ್ ಕೊತ್ನಳ್ಳಿ ಸೇರಿದಂತೆ ಇತರರು ಭಾಗವಹಿಸ ಲಿದ್ದಾರೆ ಎಂದರು.
ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಒಕ್ಕಲಿಗ ಸಮುದಾಯದ ಪುರುಷರಿಗೆ ವಾಲಿಬಾಲ್, ಮಹಿಳೆ ಯರಿಗೆ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ. ವಿಜೇತರಿಗೆ ನಗದು ಬಹುಮಾನ ವಿತರಿಸಲಾಗುವುದು.
ನೇರುಗಳಲೆ ಗ್ರಾಮ ಪಂಚಾ ಯಿತಿ ವ್ಯಾಪ್ತಿಯ ಮಹಿಳೆ ಮತ್ತು ಪುರುಷರ ಪ್ರತ್ಯೇಕ ವಿಭಾಗದಲ್ಲಿ ಹಗ್ಗಜಗ್ಗಾಟ, ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. ಒಂದರಿAದ ೧೦ ನೇ ತರಗತಿ ವಿದ್ಯಾರ್ಥಿಗಳಿಗೆ, ಪಿಯುಸಿಯಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗದಲ್ಲಿ ಗದ್ದೆ ಓಟ ಆಯೋಜಿಸಲಾಗಿದೆ. ಇದರೊಂದಿಗೆ ದಂಪತಿ ಓಟ ಸ್ಪರ್ಧೆಯಿದ್ದು, ೬೫ ವರ್ಷ ಮೇಲ್ಪಟ್ಟವರಿಗೆ ಪಾಸಿಂಗ್ ದ ಬಾಲ್, ಸಾರ್ವಜನಿಕ ವಿಭಾಗದಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕ್ರೀಡಾಕೂಟದ ಬಗ್ಗೆ ಹೆಚ್ಚಿನ ಮಾಹಿತಿಗೆ ಮೊ: ೯೪೪೯೨೭೫೮೫೫, ೭೨೫೯೯೬೭೫೨೦ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.
ಗೋಷ್ಠಿಯಲ್ಲಿ ಸಂಘದ ಉಪಾ ಧ್ಯಕ್ಷರಾದ ಜೋಯಪ್ಪ, ಲೋಕೇಶ್, ಕಾರ್ಯದರ್ಶಿ ಹೆಚ್.ಎ. ರಾಜೇಶ್, ಖಜಾಂಚಿ ಚಂದ್ರಪ್ರಸಾದ್, ನಿರ್ದೇಶಕ ಪ್ರಮೋದ್ ಅವರುಗಳು ಉಪಸ್ಥಿತರಿದ್ದರು.