ಮಡಿಕೇರಿ, ಜು. ೧೮: ವಿಧಾನಸೌಧದಲ್ಲಿ ಅರಣ್ಯ ಸಚಿವರು, ಪರಿಶಿಷ್ಟ ವರ್ಗಗಳ ಮತ್ತು ಯುವಜನ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ನೆನೆಗುದಿಗೆ ಬಿದ್ದಿರುವ ಅರಣ್ಯ ಕಾಯ್ದೆ ಮತ್ತು ಪರಿಹಾರ ಕುರಿತು ಸಭೆ ನಡೆಯಿತು.
ಶಾಸಕ ಎ.ಎಸ್ ಪೊನ್ನಣ್ಣ ಅವರು ಸಚಿವರಿಗೆ ಸವಿವರವಾಗಿ ಪರಿಸ್ಥಿತಿಯನ್ನು ವಿವರಿಸಿದರು.