ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ನಾಮಕರಣ
ಬೆಂಗಳೂರು, ಜು. ೧೮: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್ (ಇಂಡಿಯಾ) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು. ೨೬ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. ೧೧ ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ ೧೧ ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ. ಮಹಾರಾಷ್ಟç, ಮುಂಬೈನಲ್ಲಿ ಮತ್ತೆ ಸಭೆ ಸೇರಲಿದ್ದೇವೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್ಗೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ. ಮುಂಬೈನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖರ್ಗೆ ತಿಳಿಸಿದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ಸಂವಿಧಾನವನ್ನು ಕೂಡ ಹಾಳು ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಎನ್ಡಿಎ ಸಭೆಯಲ್ಲಿ ಭಾಗವಹಿಸಿದ ಕೆಲವು ಪಕ್ಷಗಳ ಹೆಸರು ಚುಣಾವಣಾ ಆಯೋಗದ ಪಟ್ಟಿಯಲ್ಲೇ ಇಲ್ಲ. ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಮಾಡುತ್ತಿದ್ದಾರೆ. ಅವರ ಜೊತೆಗಿರೋ ಪಕ್ಷಗಳು ತುಕಡೇ ತುಕಡೇ ಗ್ಯಾಂಗ್. ವಿಪಕ್ಷಗಳ ಸಭೆ ಮಾಡೋದನ್ನ ನೋಡಿ ಮೋದಿಗೆ ಭಯವಾಗಿದೆ. ಹೀಗಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸಿವೋಟರ್ ಸಮೀಕ್ಷೆ: ಪ್ರಿಯಾಂಕಾ ಗಾಂಧಿ ಪ್ರತಿಪಕ್ಷಗಳ ಅತ್ಯುತ್ತಮ ಪ್ರಧಾನಿ ಅಭ್ಯರ್ಥಿ!
ನವದೆಹಲಿ, ಜು. ೧೮: ೨೦೨೪ ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ಸೋಲಿಸಲು ಈಗಾಗಲೇ ೨೬ ಪ್ರತಿಪಕ್ಷಗಳು ಒಂದಾಗಿವೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ, ಪ್ರಿಯಾಂಕಾ ಗಾಂಧಿ ವಾದ್ರಾ ಅವರೇ ಪ್ರತಿಪಕ್ಷಗಳ ಅತ್ಯುತ್ತಮ ಪ್ರಧಾನಿ ಅಭ್ಯರ್ಥಿ ಎಂದು ಸಿವೋಟರ್ ಸಮೀಕ್ಷೆ ಹೇಳಿದೆ. ದೇಶದಲ್ಲಿ ಬದಲಾಗುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ಸಾರ್ವಜನಿಕ ಅಭಿಪ್ರಾಯವನ್ನು ಸಂಗ್ರಹಿಸಲು ೪,೦೨೯ ಮಾದರಿಗಳೊಂದಿಗೆ ಸಿವೋಟರ್ ನಡೆಸಿದ ವಿಶೇಷ ಸಮೀಕ್ಷೆಯಲ್ಲಿ ಇದು ಬಹಿರಂಗವಾಗಿದೆ. ಸಮೀಕ್ಷೆಯ ಪ್ರಕಾರ, ಒಂದು ವೇಳೆ ರಾಹುಲ್ ಗಾಂಧಿ ಅವರ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡದಿದ್ದರೆ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಒಟ್ಟಾರೆ ಮೂರನೇ ಒಂದು ಭಾಗದಷ್ಟು ಜನ ಪ್ರಿಯಾಂಕಾ ಗಾಂಧಿಯನ್ನು ಆಯ್ಕೆ ಮಾಡಿದ್ದಾರೆ.
ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ
ತಿರುವನಂತಪುರA, ಜು. ೧೮: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಮಂಗಳವಾರ ಮುಂಜಾನೆ ೪.೨೫ಕ್ಕೆ ಬೆಂಗಳೂರಿನ ಚಿನ್ಮಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ೭೯ ವರ್ಷ ವಯಸ್ಸಾಗಿತ್ತು, ಅವರು ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರು. ಉಮ್ಮನ್ ಚಾಂಡಿ ಅವರು ಕಳೆದ ೫೦ ವರ್ಷಗಳಿಗೂ ಹೆಚ್ಚು ಕಾಲ ಕೊಟ್ಟಾಯಂ ಜಿಲ್ಲೆಯ ಪುತ್ತುಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅವರು ಸದ್ಯ ಪುತ್ತುಪಲ್ಲಿ ಶಾಸಕರಾಗಿದ್ದರು.
ಮುಂಗಾರು ಅಧಿವೇಶನ: ತಾ. ೧೯ ರಂದು ಸರ್ವಪಕ್ಷ ಸಭೆ
ನವದೆಹಲಿ, ಜು. ೧೮: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ ೨೦ ರಂದು ಪ್ರಾರಂಭವಾಗಲಿದ್ದು, ಕೇಂದ್ರ ಸರ್ಕಾರ ಬುಧವಾರ ಸರ್ವಪಕ್ಷ ಸಭೆ ಕರೆದಿದೆ. ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ರೂಢಿಯಲ್ಲಿರುವ ಈ ಸರ್ವಪಕ್ಷ ಸಭೆಯಲ್ಲಿ ಮುಂಗಾರು ಅಧಿವೇಶನಕ್ಕೆ ಸಂಬAಧಿಸಿದ ಹಲವು ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಅಧಿವೇಶನದಲ್ಲಿ ಸುಗಮ ಕಲಾಪಕ್ಕೆ ಕೇಂದ್ರ ಸರ್ಕಾರ, ಪ್ರತಿಪಕ್ಷಗಳ ಸಹಕಾರ ಕೋರುವ ಸಾಧ್ಯತೆ ಇದೆ. ಈ ಬಾರಿ ಮಣಿಪುರ ಹಿಂಸಾಚಾರ, ದೆಹಲಿ ಸುಗ್ರೀವಾಜ್ಞೆ ಮತ್ತು ಇತರ ಹಲವು ವಿಷಯಗಳ ಬಗ್ಗೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಏತನ್ಮಧ್ಯೆ, ಉಪ ರಾಷ್ಟçಪತಿ ಜಗದೀಪ್ ಧನಕರ್ ಅವರು ಮಂಗಳವಾರ ಕರೆದಿದ್ದ ಇದೇ ರೀತಿಯ ಸರ್ವಪಕ್ಷ ಸಭೆಯನ್ನು, ಹಲವು ಪಕ್ಷಗಳ ನಾಯಕರು ಲಭ್ಯವಿಲ್ಲದ ಕಾರಣ ಮುಂದೂಡಲಾಗಿದೆ. ಬೆಂಗಳೂರಿನಲ್ಲಿ ವಿರೋಧ ಪಕ್ಷಗಳು ಸಭೆ ನಡೆಸುತ್ತಿದ್ದರೆ, ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟಿçÃಯ ಪ್ರಜಾಸತ್ತಾತ್ಮಕ ಒಕ್ಕೂಟ ರಾಷ್ಟç ರಾಜಧಾನಿಯಲ್ಲಿ ಸಭೆ ನಡೆಸುತ್ತಿದೆ.