ಸಿದ್ದಾಪುರ, ಜು. ೧೮: ಅಕ್ರಮವಾಗಿ ಜೂಜಾಟವಾಡುತ್ತಿದ್ದ ಐವರನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿದ್ದಾಪುರ ಠಾಣಾ ವ್ಯಾಪ್ತಿಗೆ ಒಳಪಡುವ ಅರೆಕಾಡು ರಸ್ತೆಯಲ್ಲಿರುವ ಖಾಸಗಿ ಕಾಫಿ ತೋಟದ ಬಳಿ ಅಕ್ರಮವಾಗಿ ಜೂಜಾಟವಾಡುತ್ತಿರುವ ಬಗ್ಗೆ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿದರು.