ಮಡಿಕೇರಿ, ಜು. ೧೮: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವ ರನ್ನು ಕರ್ನಾಟಕ ರಾಜ್ಯ ರೈತ ಸಂಘದ ನಿಯೋಗ ಭೇಟಿಯಾಗಿ ರೈತರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಿತು.

ಈ ಸಂದರ್ಭ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಭಾಗಿಯಾಗಿ ಜಿಲ್ಲೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಪರಿಹಾರಕ್ಕೆ ಕೋರಿದರು.

ಈ ಸಂದರ್ಭ ಕೃಷಿ ಸಚಿವ ಚೆಲುವರಾಯಸ್ವಾಮಿ, ತೋಟಗಾರಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.