ಸೋಮವಾರಪೇಟೆ, ಜು. ೧೯: ಪಟ್ಟಣದಿಂದ ಹಾನಗಲ್ಲು ಬಾಣೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯು ಕುಸಿಯುವ ಸ್ಥಿತಿಯಲ್ಲಿದ್ದು, ತಕ್ಷಣ ಪರಿಹಾರ ಕಾರ್ಯ ಕೈಗೊಳ್ಳದಿದ್ದಲ್ಲಿ ಗ್ರಾಮಕ್ಕೆ ಸಂಪರ್ಕ ಕಡಿತಗೊಳ್ಳುವ ಆತಂಕ ಎದುರಾಗಿದೆ.
ಇದರೊಂದಿಗೆ ಸೋಮವಾರಪೇಟೆ-ಶಾಂತಳ್ಳಿ ರಾಜ್ಯ ಹೆದ್ದಾರಿಗೂ ಕಂಟಕ ಎದುರಾಗಲಿದ್ದು, ಲೋಕೋ ಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಂಜಿನಿಯರಿAಗ್ ವಿಭಾಗದ ಅಧಿಕಾರಿಗಳು ಇತ್ತ ಗಮನ ಹರಿಸಬೇಕಾದ ಅಗತ್ಯತೆ ಹೆಚ್ಚಿದೆ.
ಪಟ್ಟಣದಿಂದ ಮೂರು ಕಿ.ಮೀ. ಅಂತರದಲ್ಲಿರುವ, ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಾನಗಲ್ಲು ಬಾಣೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿವೆ.
ಇದರೊAದಿಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ತೆರಳುವ ರಸ್ತೆಯೂ ಇದಾಗಿದೆ. ಸೋಮವಾರಪೇಟೆ-ಶಾಂತಳ್ಳಿ ರಾಜ್ಯ ಹೆದ್ದಾರಿಯ ಆಲೇಕಟ್ಟೆ ಬಳಿಯಿಂದ ಹಾನಗಲ್ಲುಬಾಣೆ ಗ್ರಾಮಕ್ಕೆ ಸಂಪರ್ಕಿಸುವ ಸ್ಥಳದಲ್ಲಿಯೇ ರಸ್ತೆಯ ಒಂದು ಪಾರ್ಶ್ವ ಕುಸಿಯುತ್ತಿದೆ. ಒಂದು ವೇಳೆ ಮಳೆ ಹೀಗೇ ಮುಂದುವರೆದರೆ ಸಂಪೂರ್ಣ ರಸ್ತೆ ಕುಸಿಯಲಿದೆ. ಇದರೊಂದಿಗೆ ಅತೀ ಭಾರದ ವಾಹನಗಳು ತೆರಳಿದರೂ ಸಹ ರಸ್ತೆಗೆ ಸಂಚಕಾರ ಎದುರಾಗಲಿದೆ.
ತಕ್ಷಣ ಸಂಬAಧಿಸಿದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.