ಮಡಿಕೇರಿ, ಜು. ೧೯: ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಪದವಿ ಮಟ್ಟದ ಕೊಡವ ಸಂಯುಕ್ತ ಅಧ್ಯಯನ ಮಂಡಳಿಯನ್ನು ರಚಿಸಲಾಗಿದೆ.
ಇದರ ಅಧ್ಯಕ್ಷರಾಗಿ ಮಂಗಳೂರಿನ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ|| ಮೀನಾಕ್ಷಿ ಎಂ.ಎA., ಸದಸ್ಯರುಗಳಾಗಿ ಮೈಸೂರು ಯುವರಾಜ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾಗಿರುವ ಡಾ|| ರೇಖಾವಸಂತ್, ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ|| ಕಾವೇರಿಯಪ್ಪ, ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ|| ಕಾವೇರಿ ಪ್ರಕಾಶ್ ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ|| ರೇವತಿ ಪೂವಯ್ಯ ಅವರುಗಳನ್ನು ನೇಮಕ ಮಾಡಲಾಗಿದೆ. ಇವರುಗಳನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಿಸಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.