ಕೂಡಿಗೆ, ಜು. ೧೯: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನ ನಬಾರ್ಡ್ ಪ್ರಾಯೋಜಿತದಲ್ಲಿ ನಿರ್ಮಿಸಲಾದ ಕಟ್ಟಡದ ಉದ್ಘಾಟನಾ ಸಮಾರಂಭ ತಾ. ೨೨ ರಂದು ಸಂಘದ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ನೆರವೇರಿಸುವರು. ಗೋದಾಮಿನ ಉದ್ಘಾಟನೆಯನ್ನು ಜಿಲ್ಲಾ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಪಿ. ಗಣಪತಿ, ನಾಮಫಲಕದ ಉದ್ಘಾಟನೆಯನ್ನು ಸಂಸದ ಪ್ರತಾಪ್ ಸಿಂಹ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷ ಹೆಚ್.ಟಿ. ಕುಶಾಲಪ್ಪ ವಹಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಬೋಜೇಗೌಡ, ಜಿಲ್ಲಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಎಸ್. ಹರೀಶ್ ಪೂವಯ್ಯ, ತೊರೆನೂರು ಸಹಕಾರ ಸಂಘದ ಉಪಾಧ್ಯಕ್ಷೆ ಎಂ.ಟಿ. ಲಲಿತ, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕರಾದ ಬಿ.ಕೆ. ಚಿಣ್ಣಪ್ಪ, ಬಿ.ಡಿ. ಮಂಜುನಾಥ, ಎಸ್.ಬಿ. ಭರತ್ ಕುಮಾರ್, ಜಲಜಾ ಶೇಖರ್, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಸಹಕಾರ ಸಂಘದ ಉಪ ನಿಬಂಧಕ ಎಂ.ಎಸ್. ಕೃಷ್ಣ ಪ್ರಸಾದ್ ಸೇರಿದಂತೆ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರುಗಳು, ಸಹಕಾರ ಸಂಘದ ಇಲಾಖೆಯ ಅಧಿಕಾರಿ ವರ್ಗದವರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತೊರೆನೂರು ಸಹಕಾರ ಸಂಘದ ಅಧ್ಯಕ್ಷ ಹೆಚ್.ಟಿ. ಕುಶಾಲಪ್ಪ ತಿಳಿಸಿದ್ದಾರೆ.