ಬೆAಗಳೂರು, ಜು. ೧೯: ನಗರದಲ್ಲಿ ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸುಹೇಲ್, ಉಮರ್, ತಬ್ರೇಜ್, ಮುದಾಸಿರ್, ಪೈಜಲ್ ರಬ್ಬಾನಿ ಎಂಬವರು ಬಂಧಿತ ಆರೋಪಿ ಗಳಾಗಿದ್ದು, ಈ ಟೀಂನ ಲೀಡರ್ ಎನ್ನಲಾಗಿರುವ ಜುನೈದ್ ಎಂಬಾತ ತಲೆಮರೆಸಿಕೊಂಡಿದ್ದಾನೆ.

ಪೊಲೀಸ್ ಕಮಿಷನರ್ ಬಿ. ದಯಾನಂದ್ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿ, ಕೆಲವೊಂದು ಖಚಿತ ಮಾಹಿತಿ ಆಧಾರದ ಮೇಲೆ ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ತಯಾರಿ ಮಾಡುತ್ತಿದ್ದ ಸಮಾಜ ಘಾತುಕ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ೭ ಕಂಟ್ರಿ ಮೇಡ್ ಪಿಸ್ತೂಲ್, ೪೫ ಜೀವಂತ ಗುಂಡುಗಳು, ಎರಡು ವಾಕಿಟಾಕಿ ವಶಕ್ಕೆ ಪಡೆದಿರುವುದಾಗಿ ತಿಳಿಸಿದರು.

ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಗಳು ೨೦೦೮ರ ಸರಣಿ ಬಾಂಬ್ ಉಗ್ರ ಟಿ. ನಜೀರ್ ಜೊತೆ ಹಾಗೂ ಮತ್ತೊಬ್ಬ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಉಗ್ರನ ಜೊತೆ ಸಂಪರ್ಕ ಹೊಂದಿದ್ದಾರೆ. ಐವರು ಶಂಕಿತರು ಈ ಇಬ್ಬರು ಉಗ್ರರ ಸಂಪರ್ಕಕ್ಕೆ ಸಿಕ್ಕಿ ವಿಧ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡುತ್ತಿದ್ದರು. ವಿದೇಶ ದಲ್ಲಿರುವ ಉಗ್ರ ಸ್ಫೋಟಕ್ಕೆ ಬೇಕಾದ ವಸ್ತುಗಳ ಪೂರೈಕೆ ಮಾಡುತ್ತಿದ್ದ. ದೇಶ ವಿರೋಧಿ ಶಕ್ತಿಗಳು ಯಾರಿದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆಸ ಲಾಗುತ್ತಿದೆ. ಶಂಕಿತರ ಮೇಲೆ ಯುಎಪಿಎ ಆ್ಯಕ್ಟ್ ಜಾರಿ ಮಾಡ ಲಾಗಿದೆ. ಟಿ. ನಜೀರ್ ಎಲ್‌ಇಟಿ ಸಂಘಟನೆಗೆ ಸೇರಿದ ಉಗ್ರನಾಗಿದ್ದು, ಈತನ ಜೊತೆ ಪರಪ್ಪನ ಅಗ್ರಹಾರ ಜೈಲಿನಿಂದ ಸಂಪರ್ಕ ಬೆಳೆದಿತ್ತು. ಆರ್‌ಟಿ ನಗರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಶಂಕಿತ ಉಗ್ರ ಜುನೈದ್ ಅಹಮದ್

(ಮೊದಲ ಪುಟದಿಂದ) ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾನೆ. ಜುನೈದ್ ಅಹಮದ್ ಹಾಗೂ ಟಿ. ನಾಜಿರ್‌ನ ಅಣತಿಯಂತೆ ವಿಧ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಲಾಗುತ್ತಿತ್ತು. ಸದ್ಯ ಶಂಕಿತರಿAದ ೧೨ ಮೊಬೈಲ್ ಜಪ್ತಿ ಮಾಡಲಾಗಿದ್ದು, ಇವರು ಮೆಕ್ಯಾನಿಕ್, ಡ್ರೆöÊವರ್ ರೀತಿಯ ಕೆಲಸ ಮಾಡಿಕೊಂಡಿದ್ದರು ಎಂದು ದಯಾನಂದ್ ವಿವರಿಸಿದರು.

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಇವರುಗಳು ಮೊದಲ ಬಾರಿ ಜೈಲಿಗೆ ಹೋದಾಗ ೧೮ ತಿಂಗಳು ಜೈಲಲ್ಲಿ ಇದ್ದರು. ೨೦೨೦ ರಲ್ಲಿ ಜೈಲಿಗೆ ಹೋದಾಗ ೮ ತಿಂಗಳು ಜೈಲಿಗೆ ಹೋಗಿದ್ದರು. ಈ ವೇಳೆ ಉಗ್ರ ನಜೀರ್ ಸಂಪರ್ಕ ಹೊಂದಿದ್ದಾರೆ. ಶಂಕಿತ ಉಗ್ರರಿಗೆ ಹೊರಗಡೆಯಿಂದ ಹಣ ಪೂರೈಕೆ ಆಗಿದೆ. ಲಷ್ಕರ್ ಎ ತೊಯ್ಬಾದ ಟಿ. ನಜೀರ್‌ನನ್ನು ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲಾಗುವುದು ಎಂದು ತಿಳಿಸಿದರು.

೭ ದಿನಗಳ ಕಾಲ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ಬಂಧಿಸಿರುವ ಐವರು ಶಂಕಿತ ಉಗ್ರರನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ಕೋರ್ಟ್ ನೀಡಿದೆ. ಬಂದೋಬಸ್ತ್ನಲ್ಲಿ ಬಂಧಿಸಲಾದ ಉಗ್ರರನ್ನು ಎನ್‌ಐಎ ವಿಶೇಷ ಕೋರ್ಟ್ಗೆ ಹಾಜರುಪಡಿಸ ಲಾಗಿತ್ತು. ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಶಂಕಿತ ಉಗ್ರರನ್ನು ವಶಕ್ಕೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದರು. ಪೊಲೀಸರ ಮನವಿ ಪರಿಗಣಿಸಿದ ಕೋರ್ಟ್ ಐವರು ಉಗ್ರರನ್ನು ೭ ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ. ರಹಸ್ಯ ಸ್ಥಳದಲ್ಲಿ ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ.

ಮುಖ್ಯಮAತ್ರಿ ಅಭಿನಂದನೆ

ಸಿಸಿಬಿ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, 'ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.