ಕೂಡಿಗೆ, ಜು. ೨೦: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಮೇ ತಿಂಗಳ ಅಂತ್ಯಕ್ಕೆ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಸುಶೀಲಮ್ಮ ಅವರಿಗೆ ಕೂಡ್ಲೂರು ಅಂಗನವಾಡಿ ಕೇಂದ್ರದಲ್ಲಿ ಬೀಳ್ಕೊಡಲಾಯಿತು.

ನಿವೃತ್ತಗೊಂಡ ಸುಶೀಲಮ್ಮ ಅವರನ್ನು ಅಂಗನವಾಡಿ ಕೇಂದ್ರ, ಕೂಡುಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಅಂಗನವಾಡಿ ಕೇಂದ್ರದಲ್ಲಿ ಸುಶೀಲಮ್ಮ ಮಕ್ಕಳ ಆರೋಗ್ಯ ಆರೈಕೆಯೊಂದಿಗೆ ಪಾಲಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿದ್ದರು ಎಂದರು.

ಫ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಹೆಚ್.ಎಸ್. ಸುಜಾತ ಮಾತ ನಾಡಿದರು. ನವಗ್ರಾಮದ ಅಂಗನ ವಾಡಿ ಕೇಂದ್ರದ ಕಾರ್ಯಕರ್ತೆ ಕಲಾವತಿ, ಸಹಾಯಕಿ ತ್ರಿಪುರ ಸುಂದರಿ, ಶಾಲೆಯ ಶಿಕ್ಷಕರು ಇದ್ದರು.